Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಬೊಮ್ಮಸಂದ್ರ: ಬಿಜೆಪಿ ಮುಖಂಡನ ಬರ್ಬರ ಹತ್ಯೆ; ಉದ್ವಿಗ್ನ ಸ್ಥಿತಿ-ಲಘು ಲಾಠಿ ಪ್ರಹಾರ

ಆನೇಕಲ್‌: ತಾಲೂಕಿನ ಬೊಮ್ಮಸಂದ್ರದ ಬಿಟಿಎಲ್‌ ಕಾಲೇಜಿನ ಬಳಿ ಬಿಜೆಪಿ ಮುಖಂಡರೊಬ್ಬರನ್ನು  ಮಂಗಳವಾರ ಬೆಳಗಿನ ಜಾವ ಮಾರಕಾಯುಧಗಳಿಂದ ಕೊಚ್ಚಿ  ಬರ್ಬರವಾಗಿ ಹತ್ಯೆಗೈಯಲಾಗಿದೆ.

ವಾಯುವಿಹಾರಕ್ಕೆಂದು ತೆರಳಿದ್ದ ಬೊಮ್ಮಸಂದ್ರ ಪುರಸಭೆಯ ಸದಸ್ಯ ಶ್ರೀನಿವಾಸ್‌ ಅಲಿಯಾಸ್‌ ಕಿತ್ತಗಾನಹಳ್ಳಿ ವಾಸು(38) ಎನ್ನುವವರ ಕಾರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.

ಸೂರ್ಯ ಸಿಟಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.  ಘಟನೆಯ ಬಳಿಕ ಬಿಟಿಎಂ ಕಾಲೇಜ್‌ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗೃತಾ ಕ್ರಮವಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿಯ 2 ತುಕಡಿ ನಿಯೋಜಿಸಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಅಮಿತ್‌ ಸಿಂಗ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೊಮ್ಮಸಂದ್ರದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದು,ಹೊಸೂರು ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ನಾರಾಯಣ ಸ್ವಾಮಿ ಸೇರಿದಂತೆ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

ಪ್ರತಿಭಟನಾ ನಿರತರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ, ತಳ್ಳಾಟ ನಡೆದಿದ್ದು,ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿರುವ ಬಗ್ಗೆ ವರದಿಯಾಗಿದೆ.

No Comments

Leave A Comment