Log In
BREAKING NEWS >
ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿ ಶಿರೂರು ಶ್ರೀನಾಮಪತ್ರ ಸಲ್ಲಿಕೆ.....ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ರಾಷ್ಟ್ರಪತಿ ಹುದ್ಧೆಗೆ ಎಲ್ ಕೆ ಆಡ್ವಾಣಿ ಹೆಸರು ಸೂಚಿಸಿದ ಪ್ರಧಾನಿ ಮೋದಿ

ನವದೆಹಲಿ: ಮುಂದಿನ ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಅವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ ಎಂದು ಝೀ ನ್ಯೂಸ್ ವರದಿ ಮಾಡಿದೆ.

ಗುಜರಾತ್ ನ ಸೋಮನಾಥ ದಲ್ಲಿ ನಡೆದ ಬಿಜೆಪಿ ವರಿಷ್ಠರ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಖುದ್ದಾಗಿ ಆಡ್ವಾಣಿ ಅವರ ಹೆಸರನ್ನು ಪ್ರಸ್ತಾವಿಸಿದ್ದು, ಇದರೊಂದಿಗೆ ಆಡ್ವಾಣಿ ಅವರಿಗೆ ರಾಷ್ಟ್ರಪತಿ ಹುದ್ದೆಯನ್ನು ಗುರುದಕ್ಷಿಣೆಯಾಗಿ ನೀಡಲಿದ್ದಾರೆ.

ಬಿಜೆಪಿ ವರಿಷ್ಠರ ಸಭೆಯಲ್ಲಿ ಅಮಿತ್ ಶಾ, ಕೇಶುಭಾಯಿ ಪಟೇಲ್ ಮತ್ತು ಎಲ್ ಕೆ ಆಡ್ವಾಣಿ ಅವರು ಉಪಸ್ಥಿತರಿದ್ದರು. ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ ಪ್ರಚಂಡ ಗೆಲುವು ತನ್ನ ಆಯ್ಕೆಯ ಅಭ್ಯರ್ಥಿಯನ್ನು ಮುಂದಿನ ರಾಷ್ಟ್ರಪತಿಯನ್ನಾಗಿ ಮಾಡುವ ಅವಕಾಶ ಬಿಜೆಪಿಗೆ ಒದಗಿದೆ.

No Comments

Leave A Comment