Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಕಾರವಾರ, ಮಡಿಕೇರಿ, ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣ

ಬೆಂಗಳೂರು: ಕಾರವಾರ, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣ(Air Strip) ರ್ಮಿಸುವುದಾಗಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ 2017-18ನೇ ಸಾಲಿನ ಬಜೆಟ್ ಮಂಡಿಸದ ಸಿಎಂ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ನಿರ್ಮಾಣ ಮಾಡುವುದಾಗಿ ಹಾಗೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆಗಾಗಿ 286 ಎಕರೆ ಭೂಸ್ವಾಧೀನಕ್ಕಾಗಿ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ ಈ ವಿಸ್ತರಣಾ ಕಾರ್ಯಕ್ಕೆ ರಾಜ್ಯ ಸರ್ಕಾರ ಅಗತ್ಯ ಸೌಲಭ್ಯ ಕಲ್ಲಿಸಲಿದೆ ಎಂದರು.

2017-18ನೇ ಸಾಲಿನ ಬಜೆಟ್ ನಲ್ಲಿ ಸಿದ್ದರಾಮಯ್ಯ ಅವರು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಗೆ ಒಟ್ಟಾರೆಯಾಗಿ 790 ಕೋಟಿ ರುಪಾಯಿ ಅನುದಾನ ನೀಡಿದ್ದಾರೆ.

No Comments

Leave A Comment