Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಪ್ರಭಾರಿ ಉಪನೋಂದಣಾಧಿಕಾರಿ ಮರಿಗಾದಿ ಮನೆ ಮೇಲೆ ಎಸಿಬಿ ದಾಳಿ

ಹೊಸಪೇಟೆ: ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಪ್ರಭಾರಿ ಉಪನೋಂದಣಾಧಿಕಾರಿ ಕೆ.ಮರಿಗಾದಿ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹೊಸಪೇಟೆಯ ಬಸವೇಶ್ವರ ಬಡಾವಣೆಯಲ್ಲಿರುವ ಮರಿಗಾದಿ ಅವರ ಮನೆಯ ಮೇಲೆ ಇಂದು ಬೆಳಿಗ್ಗೆ ಎಸಿಬಿ ಎಸ್‌ಪಿ ಅನಿತಾ ಹದ್ದಣ್ಣನವರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಮರಿಗಾದಿ ಅವರ ಕಚೇರಿ ಮತ್ತು ಆಪ್ತ ಸಂಬಂಧಿಕರ ಮನೆಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

No Comments

Leave A Comment