Log In
BREAKING NEWS >
ನಾಡಿನ ಸಮಸ್ತ ಜನತೆಗೆ,ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ಬಳಗದ ಯುಗಾದಿ ಹಬ್ಬದ ಶುಭಾಶಯಗಳು.......ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಅಫ್ಘಾನಿಸ್ಥಾನ ಸೇನಾ ನೆಲೆ ಮೇಲೆ ಉಗ್ರದಾಳಿ; 15ಜನರ ಹತ್ಯೆ

ಕಾಬುಲ್: ಆಫ್ಘಾನಿಸ್ಥಾನದ ಉರುಜ್ಗನ್ ಪ್ರಾಂತ್ಯದ ಸೇನಾ ನೆಲೆಯಲ್ಲಿ ನಡೆದ ಉಗ್ರ ದಾಳಿ ಮತ್ತು ನಂತರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಮತ್ತು 11 ಜನ ಉಗ್ರರು ಹತ್ಯೆಯಾಗಿದ್ದಾರೆ ಎಂದು ಸೋಮವಾರ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ತಿರಿನ್ ಕೋಟ್ ಜಿಲ್ಲೆಯ ಸೇನಾ ನೆಲೆಯ ಮೇಲೆ ಶಸ್ತ್ರಸಜ್ಜಿತ ಹಲವು ಉಗ್ರರು ಭಾನುವಾರ ರಾತ್ರಿ ದಾಳಿ ನಡೆಸಿದರು” ಎಂದು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಹೇಳಿದ್ದಾರೆ.

ಈ ಉಗ್ರರು ತಾಲಿಬಾನ್ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ಕೂಡ ಅವರು ತಿಳಿಸಿದ್ದಾರೆ.

ಸೋಮವಾರ ಬೆಳಗಿನ ಜಾವ ಹೆಚ್ಚುವರಿ ಭದ್ರತಾ ಪಡೆ ಆಗಮಿಸುವವರೆಗೆ ಈ ಭಯೋತ್ಪಾದಕರು ಸೇನಾ ನೆಲೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು ಎಂದು ಕೂಡ ತಿಳಿಯಲಾಗಿದೆ. ಈ ದಾಳಿಯಲ್ಲಿ ಉಗ್ರರು ಕೆಲವು ಸೈನಿಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ಕೂಡ ಅಧಿಕಾರಿ ಹೇಳಿದ್ದಾರೆ.

“ಈ ನೆಲೆಯ ರಕ್ಷಣಾ ಕಾರ್ಯಾಚರಣೆಯನ್ನು ಹೆಚ್ಚುವರಿ ಭದ್ರತಾ ಪಡೆ ಪ್ರರಾಂಭಿಸಿದ್ದು, ವಶಪಡಿಸಿಕೊಂಡಿರುವ ಯೋಧರನ್ನು ರಕ್ಷಿಸಲು ಶೋಧ ಕಾರ್ಯಾಚರಣೆ ಮುಂದುವರೆದಿದೆ” ಎಂದು ಅವರು ತಿಳಿಸಿದ್ದಾರೆ.

No Comments

Leave A Comment