Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಧರ್ಮಶಾಲಾ ಟೆಸ್ಟ್: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್, ರೆನ್ಶಾ ಔಟ್

ಧರ್ಮಶಾಲಾ: ಆಸ್ಟ್ರೇಲಿಯಾ-ಭಾರತ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಧರ್ಮಶಾಲಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಆಸೀಸ್ ಬ್ಯಾಟ್ ಆಯ್ಕೆ ಮಾಡಿಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ರೆನ್ಶಾರನ್ನು ಅವರನ್ನು ವೇಗಿ ಉಮೇಶ್ ಯಾದವ್ ಬೌಲ್ಡ್ ಮಾಡಿದರು. ಇದರೊಂದಿಗೆ ಆಸ್ಟ್ರೇಲಿಯಾ ಐದು ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ  21 ರನ್ ಗಳಿಸಿದೆ. ಪ್ರಸ್ತುತ ಡೇವಿಡ್ ವಾರ್ನರ್ ಮತ್ತು ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಟೂರ್ನಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದು, ಧರ್ಮಶಾಲಾದ ಅಂತಿಮ ಹಾಗೂ ಕೊನೆಯ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾಗೆ ನಿರ್ಣಾಯಕ ಪಂದ್ಯವಾಗಿದೆ.

No Comments

Leave A Comment