Log In
BREAKING NEWS >
ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ಹುಬ್ಬಳ್ಳಿಯಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ; ಕಿಮ್ಸ್‌ ಆಸ್ಪತ್ರೆಯಲ್ಲಿ ಕಾದು ಕುಳಿತ ರೋಗಿಗಳು

ಹುಬ್ಬಳ್ಳಿ: ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದದಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಇದರಿಂದ, ಆಸ್ಪತ್ರೆಯಲ್ಲಿ ವೈದ್ಯರಿಲ್ಲಲ್ಲದೆ ರೋಗಿಗಳು ಚಿಕಿತ್ಸೆಗಾಗಿ ಸರದಿಯಲ್ಲಿ ಕಾದು ಕುಳಿತಿದ್ದಾರೆ.

ನಗರದ ಕಿಮ್ಸ್ ದ್ವಾರದಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ವೈದ್ಯರು, ಕಿರಿಯ ವೈದ್ಯರು, ವೈದ್ಯಕೀಯ ಪಿ.ಜಿ. ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ಸರದಿಯಲ್ಲಿ ಕಾದು ಕುಳಿತ ರೋಗಿಗಳು

ವೈದ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಕಿಮ್ಸ್ ಹೊರರೋಗಿ ವಿಭಾಗದಲ್ಲಿ ವೈದ್ಯರ ಕೊರತೆ ಇತ್ತು. ಕೇವಲ ಒಂದಿಬ್ಬರು ಪಿ.ಜಿ. ವೈದ್ಯಕೀಯ ವಿದ್ಯಾರ್ಥಿಗಳು ರೋಗಿಗಳ ತಪಾಸಣೆ ಮಾಡುತ್ತಿದ್ದಾರೆ. ಹೊರಗೆ ರೋಗಿಗಳು ಸರದಿಯಲ್ಲಿ ಕಾದು ಕುಳಿತ್ತಿದ್ದರು.

ತುರ್ತು ಚಿಕಿತ್ಸಾ ವಿಭಾಗ ಹೊರತುಪಡಿಸಿ ಉಳಿದ ವಿಭಾಗಗಳಲ್ಲಿ ಬೆರಳೆಣಿಕೆಯಷ್ಟು ಮಾತ್ರ ಪಿ.ಜಿ. ವೈದ್ಯಕೀಯ ವಿದ್ಯಾರ್ಥಿಗಳು ಇದ್ದರು.

No Comments

Leave A Comment