Log In
BREAKING NEWS >
ದೀಪ ಪ್ರಜ್ವಲಿಸುವುದರೊ೦ದಿಗೆ ಕಲ್ಯಾಣಪುರ ಭಜನಾ ಸಪ್ತಾಹ ಮಹೋತ್ಸವಕ್ಕೆ ಅಮ್ಮು೦ಜೆ ಗುರುಪ್ರಸಾದ್ ನಾಯಕ್ ರವರಿ೦ದ ಅದ್ದೂರಿಯ ಚಾಲನೆ........ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಜಮ್ಮು-ಕಾಶ್ಮೀರ: ಸಚಿವ ಫರೂಕ್ ಅಬ್ದ್ರಾಬಿ ಮನೆ ಮೇಲೆ ಉಗ್ರರ ದಾಳಿ, ಓರ್ವ ಪೊಲೀಸ್ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸಚಿವ ಫರೂಖ್ ಅಬ್ದ್ರಾಬಿ ಮನೆಗೆ ಶಂಕಿತ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಪೊಲೀಸ್’ಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ದಕ್ಷಿಣ ಕಾಶ್ಮೀರದ ಅನಂತ್’ನಾಗ್ ಜಿಲ್ಲೆಯಲ್ಲಿರುವ ಫರೂಖ್ ಅವರ ಮನೆ ಬಳಿ ಬಂದಿರುವ ಶಂಕಿತ ಉಗ್ರರ ತಂಡ ಏಕಾಏಕಿ ಪೊಲೀಸ್ ಮೇಲೆ ದಾಳಿ ಮಾಡಿದ್ದಾರೆ. ನಂತರ ಮನೆಗೆ ನುಗ್ಗಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಅಬ್ದ್ರಾಬಿ ಜಮ್ಮು ಮತ್ತು ಕಾಶ್ಮೀರದ ಹಜ್ ಮತ್ತು ವಕ್ಫ್ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

No Comments

Leave A Comment