Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: 11 ಸಾವು, 20 ಜನರಿಗೆ ಗಾಯ

ಭೂಪಾಲ್: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಟ್ರಕ್ ವೊಂದು ಉರುಳಿ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಮಿನಿ ಟ್ರಕ್ ವೊಂದು 50 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು. ಛರ್ಗವನ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಕಮಥಿಯಾ ಗ್ರಾಮದ ಬಳಿ ಬರುತ್ತಿದ್ದಂಯೇ ಮಿನಿಟ್ರಕ್ ಉರುಳಿ ಬಿದ್ದಿದೆ. ಪರಿಣಾಮ ಟ್ರಕ್ ನಲ್ಲಿದ್ದ 50 ಮಂದಿಯ ಪೈಕಿ 11 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇನ್ನಿಬ್ಬರು ಗಂಧೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಅವರೂ ಸಾವನ್ನಪ್ಪಿದರು. ಪ್ರಸ್ತುತ ಉಳಿದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಜಬಲ್ಪುರ ಮೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 20 ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಬಲ್ಪುರ ಪೊಲೀಸ್ ಅಧಿಕಾರಿ ಎಸ್. ವರ್ಮಾ ಅವರು ತಿಳಿಸಿದ್ದಾರೆ.

No Comments

Leave A Comment