Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ವಿಷಾನಿಲ ಸೇವಿಸಿ ಆಂದ್ರದಲ್ಲಿ ಐವರ ಸಾವು

ವಿಜಯವಾಡ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ.

ಮೊಗಾಳ್ಥುರ್ ನಲ್ಲಿ ಆಕ್ವಾ ಆಹಾರ ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಕೊಳವನ್ನು ಸ್ವಚ್ಛಗೊಳಿಸುವಾಗ ಈ ಘಟನೆ ನಡೆದಿದೆ.

ಈ ಐವರು ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆಯೇ ಅಥವಾ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಸತ್ತಿದ್ದಾರೆಯೇ ಎಂದು ಪತ್ತೆಹಚ್ಚಲು ತನಿಖೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟಕದ ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಂತ್ರಸ್ತರ ಕುಟುಂಬವರ್ಗ ಆರೋಪಿಸಿದೆ.

No Comments

Leave A Comment