Log In
BREAKING NEWS >
ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

110 ನೇ ವರ್ಷಕ್ಕೆ ಕಾಲಿಟ್ಟ ನಡೆದಾಡುವ ದೇವರು: ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಭಕ್ತರ ಒತ್ತಾಯ

ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಪ್ರಸಿದ್ಧವಾಗಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು 110ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಿದ್ದಗಂಗಾ ಮಠದಲ್ಲಿ ಅದ್ಧೂರಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದ್ದು, ಹಲವು ಗಣ್ಯರು ಹಾಜರಾಗಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂಕರ ಮಂದಿ ಭಕ್ತರು ಆಗಮಿಸಿದ್ದಾರೆ.ಶ್ರೀಗಳು 110ನೇ ವರ್ಷಕ್ಕೆ ಕಾಲಿಟ್ಟರುವ ಈ ವೇಳೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಗೌರವ ನೀಡಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.2007 ರಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 100 ನೇ ವರ್ಷದ ಜನ್ಮ ದಿನಾಚರಣೆ ವೇಳೆ ಶ್ರೀಗಳಿಗೆ ಕರ್ನಾಟಕ ರತ್ನ ಗೌರವ ನೀಡಿ ಸನ್ಮಾನಿಸಲಾಗಿತ್ತು.

ಶ್ರೀಗಳು ಪ್ರಶಸ್ತಿಗಿಂತಲೂ ದೊಡ್ಡವರು, ಆದರು ಅವರಿಗೆ ಒಂದು ಗೌರವ ಸೂಚಿಸಲು ಭಾರತ ರತ್ನ ನೀಡಬೇಕು ಎಂದು ಕೊಪ್ಪಳ ನಾಗರಾಜ್ ಎಂಬವರು ಹೇಳಿದ್ದಾರೆ.ಕಳೆದ 50 ವರ್ಷಗಳಿಂದಲೂ ಪ್ರತಿ ವರ್ಷ8 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಆಹಾರ, ವಸತಿ ಹಾಗೂ ಶಿ7ಣ ನೀಡುತ್ತಿದ್ದಾರೆ, ಮಠ0 125  ಸಂಸ್ಥೆಗಳಲ್ಲಿ ಸಾವಿರಾರು ಮಂದಿ ಮೌಲ್ಯಯುತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಹೋಟೆಲ್ ಮಾಲಿಕ ಸಿ.ವಿ ಮಹಾದೇವ್ ಎಂಬುವರು ತಿಳಿಸಿದ್ದಾರೆ.

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಸಿದ್ದಗಂಗಾ ಶ್ರೀಗಳ ಹೆಸರನ್ನು ಭಾರತ ರತ್ನ ಪ್ರಶಸ್ತಿ  ಶಿಫಾರಸು ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.ಭಾರತ ರತ್ನ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಶ್ರೀಗಳ ಹೆಸರನ್ನು ರಾಷ್ಟ್ರಪತಿಗಳ ಬಳಿ ಪ್ರಸ್ತಾಪಿಸಬೇಕು ಎಂದು ವಕೀಲ ಶಿವರಾಜ ಬಿ ನಂಜಪ್ಪ ಒತ್ತಾಯಿಸಿದ್ದಾರೆ.2015 ರಲ್ಲಿ ಕೇಂದ್ರ ಸರ್ಕಾರ ಶ್ರೀಗಳಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.

No Comments

Leave A Comment