Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ತುಮಕೂರು, ಚಿತ್ರದುರ್ಗ ಸೇರಿ ಹಲವಡೆ ಕಂಪಿಸಿದ ಭೂಮಿ: 2.9ರಷ್ಟು ತೀವ್ರತೆ ದಾಖಲು

ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಸೇರಿದತೆ ಹಲವು ಭಾಗಗಳಲ್ಲಿ ಭಾನುವಾರ ಬೆಳಿಗ್ಗೆ ಭೂಮಿ ಕಂಪಸಿದ್ದು, ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಮತ್ತು ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ಕೆಲ ಗ್ರಾಮಗಳಲ್ಲಿ ಇಂದು ಬೆಳಿಗ್ಗೆ 6.30ರ ಸುಮಾರಿಗೆ ಭೂಮಿ 2-5 ಸೆಕೆಂಡ್ ಗಳ ಕಾಲ ಕಂಪಿಸಿದೆ. ಭೂಮಿ ಕಂಪಿಸಿದ್ದರಿಂದ ಭಯಭೀತರಾದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆಂದು ವರದಿಗಳು ತಿಳಿಸಿವೆ.

ಹೊಸದುರ್ಗದ ಕಂಚೀಪುರ, ಚಿಕ್ಕಬ್ಯಾಲದೆಡೆ, ಹಂದಿನಗಡು, ಬ್ಯಾರಮಡು ಹಾಲುಮಾದನಹಳ್ಳಿ, ಪಿಲಾಜಹಳ್ಳಿ ಸೇರಿದಂತೆ ಕಲ ಗ್ರಾಮದಲ್ಲಿ ಕಂಪನದ ಅನುಭವವಾಗಿರುವುದಾಗಿ ತಿಳಿದುಬಂದಿದೆ. ಭೂಕಂಪನದಿಂದಾಗಿ ಯಾವುದೇ ಸಾವು ನೋವುಗಳು ಸಂಭವಿಸಿರುವುದಾಗಿ ವರದಿಗಳಾಗಿಲ್ಲ.

ಪ್ರಸ್ತುತ ಭೂಕಂಪನ ಮಾಪಕ ಕೇಂದ್ರದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸೂಕ್ತ ಪರಿಶೀಲನೆಯ ನಂತರವಷ್ಟೇ ಭೂಮಿ ಕಂಪಿಸಿದ್ದಕ್ಕೆ ಪ್ರಮುಖ ಕಾರಣಗಳು ತಿಳಿದುಬರಲಿದೆ.

No Comments

Leave A Comment