Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಪೋಲಿಯೊ ಹನಿ ತಪ್ಪದೇ ಹಾಕಿಸಿ- ಮೀನಾಕ್ಷಿ ಮಾಧವ

ಉಡುಪಿ: ಎಲ್ಲಾ ತಾಯಂದಿರು ತಮ್ಮ ಮಕ್ಕಳಿಗೆ ವರ್ಷದಲ್ಲಿ ಎರಡು ಬಾರಿ ಪೋಲಿಯೊ ಹನಿಯನ್ನು ತಪ್ಪದೇ ಹಾಕಿಸುವಂತೆ ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ತಿಳಿಸಿದ್ದಾರೆ.

ಅವರು ಭಾನುವಾರ ಉಡುಪಿಯ ತಾಯಿ ಮತ್ತು ಮಕ್ಕಳ ಅಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್, ದೇಶದಲ್ಲಿ 2011 ರ ನಂತರ ಪೋಲಿಯೊ ಪ್ರಕರಣಗಳು ಕಂಡು ಬಂದಿಲ್ಲ, ಆದರೂ ಸಹ ನಮ್ಮ ನೆರೆಯ ದೇಶಗಳಲ್ಲಿ ಪೊಲಿಯೋ ಪ್ರಕರಣಗಳು ಕಂಡು ಬಂದಿರುವುದರಿಂದ , ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಪೊಲಿಯೋ ನೀಡಲಾಗುತ್ತಿದೆ, ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೊ ಹಾಕಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯ್ಕ್, ಆರ್.ಸಿ.ಹೆಚ್ ಅಧಿಕಾರಿ ಡಾ. ರಾಮ, ರೋಟರಿಯ ಅಧ್ಯಕ್ಷ ಡಾ. ಸುರೇಶ್ ಶೆಣ್ಯೆ, ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ, ರೋಟರಿಯ ಲಸಿಕಾ ಕಾರ್ಯಕ್ರಮದ ಉಸ್ತುವಾರಿ ಜಯಚಂದ್ರ, ತಾಯಿ ಮತ್ತು ಮಕ್ಕಳ ಅಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಿಶೋರಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.

No Comments

Leave A Comment