Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಕೊಹ್ಲಿ ಅಲಭ್ಯ: ಆರ್‌ಸಿಬಿ ಪರ ಗೇಯ್ಲ್ ಜತೆ ಇನ್ನಿಂಗ್ಸ್ ಆರಂಭಿಸಲಿರುವ ಶೇನ್ ವಾಟ್ಸನ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಭುಜದ ಗಾಯದ ಸಮಸ್ಯೆಗೆ ತುತ್ತಾಗಿರುವ ಕಾರಣ ಇಂಡಿಯನ್ ಪ್ರಿಮಿಯರ್ ಲೀಗ್ ನ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಆರಂಭಿಕ ಪಂದ್ಯಕ್ಕೆ ಅಲಭ್ಯರಾಗಿದ್ದು ಆರ್‌ಸಿಬಿ ಆರಂಭಿಕ ಆಟಗಾರ ಕ್ರಿಸ್ ಗೇಯ್ಲ್ ಜತೆ ಶೇನ್ ವಾಟ್ಸನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಈ ಹಿಂದೆ ಆರ್‌ಸಿಬಿ ಪರ ಗೇಯ್ಲ್ ಜತೆ ವಿರಾಟ್ ಕೊಹ್ಲಿ ಅಥವಾ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸುತ್ತಿದ್ದರು. ಆದರೆ ಈ ಬಾರಿ ಇಬ್ಬರು ಆಟಗಾರರು ಗಾಯಗೊಂಡಿರುವುದರಿಂದ ತಾವು ಗೇಯ್ಲ್ ಜತೆ ಇನ್ನಿಂಗ್ಸ್ ಪ್ರಾರಂಭಿಸುವ ಸುಳಿವನ್ನು ಖಾಸಗಿ ಪತ್ರಿಕೆಗೆ ನೀಡಿದ ಸಂದರ್ಶನ ವೇಳೆ ವಾಟ್ಸನ್ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಗಾಯಗೊಂಡಿದ್ದರು. ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹಿಂದೆ ಸರಿದಿದ್ದಾರೆ. ಇನ್ನು ಕೊಹ್ಲಿ ಮೊದಲ ಪಂದ್ಯಕ್ಕೆ ಲಭ್ಯವಾಗುವ ಸಾಧ್ಯತೆಗಳಿಲ್ಲ, ಇಬ್ಬರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಇನ್ನಿಂಗ್ಸ್ ಆರಂಭಿಸುವ ಅವಕಾಶ ನನಗೆ ಲಭಿಸುವ ಸಾಧ್ಯತೆ ಇದೆ ಎಂದು ವಾಟ್ಸನ್ ತಿಳಿಸಿದ್ದಾರೆ.

No Comments

Leave A Comment