Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ದೇಶದ್ರೋಹ ಪ್ರಕರಣದಲ್ಲಿ ಎಂಡಿಎಂಕೆ ನಾಯಕ ವೈಕೋಗೆ ಜೈಲು

ಚೆನ್ನೈ: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಅವರು ಸೋಮವಾರ ಜೈಲು ಪಾಲಾಗಿದ್ದಾರೆ.

ತಮ್ಮ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಇಂದು ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಶರಣಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶ ಗೋಪಿನಾಥ್ ಅವರು, ವೈಕೋ ಅವರನ್ನು ಏಪ್ರಿಲ್ 17ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

2009, ಸೆಪ್ಟೆಂಬರ್ 15ರಂದು ಇಂದೂರ್ ನಲ್ಲಿ ಪಕ್ಷದ ಸಭೆಯಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈಕೋ ವಿರುದ್ಧ ಡಿಸೆಂಬರ್ 9, 2009ರಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ವೈಕೋ ವಿರುದ್ಧ ಡಿಸೆಂಬರ್ 30, 2010ರಲ್ಲಿ ಚಾರ್ಜ್ ಶೀಟ್ ಸಹ ಸಲ್ಲಿಸಿದ್ದರು. ಆದರೆ ಸಮನ್ಸ್ ನೀಡಲು ವಿಫಲವಾಗಿದ್ದರು. ಈ ಹಿನ್ನೆಲೆಯಲ್ಲಿ ವೈಕೋ ಇಂದು ಕೋರ್ಟ್ ಗೆ ಶರಣಾಗಿದ್ದಾರೆ.

ಕೋರ್ಟ್ ಗೆ ಶರಣಾದ ವೈಕೋ ಅವರಿಗೆ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಪಡೆದುಕೊಳ್ಳುವಂತೆ ಕೇಳಿಕೊಂಡರು. ಆದರೆ ಇದಕ್ಕೆ ಒಪ್ಪದ ವೈಕೋ ಜೈಲು ಸೇರಿದ್ದಾರೆ.

No Comments

Leave A Comment