Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಸುಳ್ಳು ದಾಖಲೆ ಸೃಷ್ಟಿ ಪ್ರಕರಣ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠದಿಂದ ಮಹತ್ವದ ತೀರ್ಪು; ವೀಣಾ ಕಾಶಪ್ಪನವರ ಜಾತಿ, ಆದಾಯ ಪ್ರಮಾಣ ಪತ್ರ ರದ್ದು

ಧಾರವಾಡ: ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಅವರು ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ.

ತಹಶೀಲ್ದಾರ್ ಮೇಲೆ ಪ್ರಭಾವ ಬೀರಿ ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದು ಜಿಲ್ಲಾ ಪಂಚಾಯ್ತಿಗೆ ಆಯ್ಕೆಯಾಗಿದ್ದರು. ಇದನ್ನು ಪ್ರಶ್ನಿಸಿ ಶೈಲಾ ನಾಡಗೌಡ ಮತ್ತು ವೀರೇಶ ಎಂಬುವವರು ರಿಟ್‌ ಅರ್ಜಿ ಸಲ್ಲಿಸಿದ್ದರು.

ರಿಟ್‌ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ ಕೊಠಾರಿ ಹಾಗೂ ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿಯನ್ನು ಪುರಸ್ಕರಿಸಿದೆ.

ವೀಣಾ ಕಾಶಪ್ಪನವರ ಸಲ್ಲಿಸಿದ್ದ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

No Comments

Leave A Comment