Log In
BREAKING NEWS >
ಉಡುಪಿಯ ಶ್ರೀಶಿರೂರು ಶ್ರೀಗಳು ಹರಿಪಾದಕ್ಕೆ-ಇನ್ನಿಲ್ಲವಾದರು ಶ್ರೀಗಳು-ಉಡುಪಿಯ ಶ್ರೀಕೃಷ್ಣಮಠ ಹಾಗೂ ಶಿರೂರು ಮಠಕ್ಕೆ ಬಿಗುಭದ್ರತೆ

ಅನಧಿಕೃತ ಪಟಾಕಿ ಕಾರ್ಖಾನೆ ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಸಾವು

ಡಾಟಿಯಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಡಾಟಿಯಾ ಜಿಲ್ಲೆಯ ಸಿಯೋಂಡಾ ಎಂಬಲ್ಲಿ ಅನಧಿಕೃತ ಪಟಾಕಿ ಕಾರ್ಖಾನೆಯೊಂದಲ್ಲಿ ಸಂಭವಿಸಿದ ಸ್ಫೋಟದಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ.

ಬುಧವಾರ ಮಧ್ಯಾಹ್ನ 12 ಗಂಟೆಗೆ ಖಾಕಿ ಮೊಹಲ್ಲಾದಲ್ಲಿರುವ ರಶೀದ್ ಖಾನ್ ಎಂಬವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಈ ಸ್ಫೋಟದಲ್ಲಿ ಖಾನ್ ಅವರ ಮನೆ ಸಂಪೂರ್ಣವಾಗಿ  ನಾಶವಾಗಿದ್ದು ಹಲವಾರು ಮಂದಿಗೆ ಗಾಯಗಳಾಗಿವೆ.

ಮನೆಯ ಮುಂದೆ ಹೋಗುತ್ತಿದ್ದ ಜನರು ಈ ಸ್ಫೋಟದಲ್ಲಿ ಸಾವಿಗೀಡಾಗಿದ್ದು ಮೃತರ ಗುರುತು ಪತ್ತೆಯಾಗಿಲ್ಲ.

ಜಿಲ್ಲಾಡಳಿತ ಸಾವಿಗೀಡಾದವರ ಕುಟುಂಬಕ್ಕೆ 2 ಲಕ್ಷ ಮತ್ತು  ಗಾಯಾಳುಗಳಿಗೆ 50,000 ಪರಿಹಾರ ಧನ ಘೋಷಿಸಿದೆ.

No Comments

Leave A Comment