Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಎಸ್‌ಡಿಎ ನೌಕರನ ಮನೆ ಮೇಲೆ ಎಸಿಬಿ ದಾಳಿ- ಚಿನ್ನಾಭರಣ ವಶ, ದಾಖಲೆಗಳ ಪರಿಶೀಲನೆ

ದಾವಣಗೆರೆ: ನಗರದ ವಾಣಿಜ್ಯ ತೆರಿಗೆ ಇಲಾಖೆಯ ಎಸ್‌ಡಿಎ ನೌಕರ ಎಸ್‌.ಎನ್‌.ಕರಿಬಸಪ್ಪ ಅವರ ಮನೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ತಂಡ ಗುರುವಾರ ಮಧ್ಯಾಹ್ನ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಎಸಿಬಿ ಡಿವೈಎಸ್‌ಪಿ ಕವಳಪ್ಪ ಅವರ ನೇತೃತ್ವದ ಅಧಿಕಾರಿಗಳ ತಂಡವು ಕರಿಬಸಪ್ಪ ಅವರ ಸರಸ್ವತಿ ನಗರದ ಮೂರು ಅಂತಸ್ತಿನ ಮನೆಯ ಮೇಲೆ ದಾಳಿ ನಡೆಸಿ, 250 ಗ್ರಾಂ ಬಂಗಾರ, 750 ಗ್ರಾಂ ಬೆಳ್ಳಿ ಆಭರಣ ಹಾಗೂ  45,000 ನಗದು ವಶಪಡಿಸಿಕೊಂಡಿದೆ. 6 ನಿವೇಶನ ಹಾಗೂ 3 ಮನೆಗಳಿಗೆ ಸಂಬಂಧಿಸಿದ್ದ ದಾಖಲೆಪತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ.

‘ಚನ್ನಗಿರಿ ತಾಲ್ಲೂಕಿನ ರಾಮಗೊಂಡನಹಳ್ಳಿಯಲ್ಲಿ ಕರಿಬಸಪ್ಪ ಅವರ ಪತ್ನಿ ರತ್ನಮ್ಮ ಅವರ ಹೆಸರಿನಲ್ಲಿ 5 ಎಕರೆ ಜಮೀನು ಇರುವ ಬಗ್ಗೆ ಮಾಹಿತಿ ಇದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನೂ ಹೆಚ್ಚಿನ ಆಸ್ತಿ ಇರುವ ಬಗ್ಗೆ ಮಾಹಿತಿ ಇದ್ದು, ತನಿಖೆ ನಡೆಯುತ್ತಿದೆ’ ಎಂದು ಎಸಿಬಿ ಡಿವೈಎಸ್‌ಪಿ ಕವಳಪ್ಪ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

No Comments

Leave A Comment