Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಶಾರದಾ ವಿಗ್ರಹ ಇ೦ದು ವಿಸರ್ಜನಾ ಮೆರವಣಿಗೆಗೆ ಸಕಲ ಸಿದ್ದತೆ........ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಶ್ರೀನಗರ ಬೈ ಎಲೆಕ್ಷನ್‌:ಮತದಾನದ ವೇಳೆ ಹಿಂಸಾಚಾರ ;3 ಬಲಿ


ಶ್ರೀನಗರ :
ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ಭಾನುವಾರ ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಹಿಂಸಾಚಾರ ಸಂಭವಿಸಿದ್ದು, ಭದ್ರತಾ ಪಡೆಗಳ ಗುಂಡಿಗೆ ಹಿಂಸಾ ನಿರತ ಮೂವರು ಯುವಕರು ಬಲಿಯಾಗಿ ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಬುದ್ಗಾಮ್‌ನ ವಿವಿಧೆಡೆ ಯುವಕರು ಹಿಂಸೆಗಿಳಿದಿದ್ದು , ಈ ವೇಳೆ ಭದ್ರತಾ ಸಿಬಂದಿಗಳೊಂದಿಗೆ ಘರ್ಷಣೆ ನಡೆದಿದೆ. ಮತಗಟ್ಟೆಯ ಮೇಲೆ ಪೆಟ್ರೋಲ್‌ ಬಾಂಬ್‌ಗಳನ್ನು ಎಸೆದಿರುವ ಬಗ್ಗೆ ವರದಿಯಾಗಿದೆ.

ಮತದಾನದ ಹಿನ್ನಲೆಯಲ್ಲಿ  ಶ್ರೀನಗರ ಕ್ಷೇತ್ರದೆಲ್ಲೆಡೆ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

No Comments

Leave A Comment