Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಈಜಿಪ್ಟ್ ನ ಚರ್ಚ್ ಮೇಲೆ ಭೀಕರ ಉಗ್ರ ದಾಳಿ; ಕನಿಷ್ಟ 13 ಸಾವು, 40ಕ್ಕೂ ಅಧಿಕ ಮಂದಿಗೆ ಗಾಯ

ಕೈರೋ: ಈಜಿಪ್ಟ್ ನ ನೈಲ್ ಡೆಲ್ಟಾದ ಚರ್ಚ್ ಮೇಲೆ ಉಗ್ರರು ನಡೆಸಿದ ಭೀಕರ ಬಾಂಬ್ ದಾಳಿಯಿಂದಾಗಿ ಕನಿಷ್ಟ 13 ಮಂದಿ ಸಾವಿಗೀಡಾಗಿ 42ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈಜಿಪ್ಟ್ ನ ಟಂಟಾ ನಗರದ ನೈಲ್ ಡೆಲ್ಟಾದ ಚರ್ಚ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆ  ಹೊತ್ತಿಲ್ಲವಾದರೂ, ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಉಗ್ರರೇ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಪ್ರಸ್ತುತ ಈಜಿಪ್ಟ್ ಪೊಲೀಸರು ಶಂಕಿತ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ. ಪ್ರಸಕ್ತ ವರ್ಷ ಕ್ರಿಶ್ಚಿಯನ್ ಅಲ್ಪ  ಸಂಖ್ಯಾತರ ಮೇಲೆ ಈಜಿಪ್ಟ್ ನಲ್ಲಿ ನಡೆಯುತ್ತಿರುವ ಮೊದಲ ದಾಳಿ ಇದಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಡಿಸೆಂಬರ್ ನಲ್ಲಿ ಈಜಿಪ್ಟ್ ರಾಜಧಾನಿ ಕೈರೋದ ಕಾಪ್ಟಿಕ್ ಕ್ಯಾಥೆಡ್ರಿಲ್ ನಲ್ಲಿ ನಡೆದ ಭೀಕರ ಬಾಂಬ್ ದಾಳಿಯಲ್ಲಿ 25 ಮಂದಿ ಸಾವನ್ನಪ್ಪಿ 49ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಹಲವು ಮಕ್ಕಳು  ಮಹಿಳೆಯರು ಸಾವನ್ನಪ್ಪಿದ್ದರು

No Comments

Leave A Comment