Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಶಾರದಾ ವಿಗ್ರಹ ಇ೦ದು ವಿಸರ್ಜನಾ ಮೆರವಣಿಗೆಗೆ ಸಕಲ ಸಿದ್ದತೆ........ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಬೆಂಗಳೂರಿನ ‘ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌’ ಜಾಗತಿಕ ಗುಣಮಟ್ಟದ್ದಾಗಲಿ: ಪ್ರಣಬ್ ಮುಖರ್ಜಿ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪನೆಯಾಗುತ್ತಿರುವ ‘ಡಾ.ಬಿ.ಆರ್. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌’ಸಂಸ್ಥೆ ಶಿಕ್ಷಣ ಸಂಸ್ಥೆಗಳಲ್ಲೇ ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಯಾಗಲಿ ಎಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್ ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಡಾ.ಬಿ.ಆರ್. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌’ಸಂಸ್ಥೆಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ರಾಷ್ಟ್ರಪತಿಗಳು, ಕರ್ನಾಟಕ ಸರ್ಕಾರ ಈ ಸಂಸ್ಥೆಯನ್ನು ಜಾಗತಿಕ ಗುಣಮಟ್ಟದ ಶಿಕ್ಷಣ ಸಂಸ್ಥೆಯಾಗಿ ಅಭಿವೃದ್ಧಿಪಡಿಸಲಿ ಎಂದು ಹೇಳಿದರು.

ಡಾ.ಬಿ.ಆರ್. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ಸಂಸ್ಥೆ ಸ್ಥಳೀಯ ಸಂಸ್ಥೆಯಾಗದೆ, ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳುವ ಮೂಲಕ ಬೆಂಗಳೂರಿನ ಮತ್ತೊಂದು ಹೆಮ್ಮೆಯಾಗಬೇಕು ಎಂದು ರಾಷ್ಟ್ರಪತಿಗಳು ಕರೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ನೆರವೇರಿಸಿದ ಪ್ರಣವ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲು ಹೊದಿಸಿ ಸನ್ಮಾನಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಸ್ಥೆಯ ಶಂಕುಸ್ಥಾಪನಾ ಸಮಾರಂಭಕ್ಕೆ ಆಗಮಿಸಿ, ಶಿಲಾನ್ಯಾಸ ನೇರವೇರಿಸಿದ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರಿಗೆ ಧನ್ಯವಾದಗಳು ಎಂದರು.

‘ಡಾ.ಬಿ.ಆರ್. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌’ಸಂಸ್ಥೆ ಸ್ಥಾಪನೆಯ ಮೂಲಕ ಸಮಗ್ರ ಅಭಿವೃದ್ಧಿ ಹಾಗೂ ಸಾಮಾಜಿಕ ಸಮಾನತೆಯ ರಾಜ್ಯ ನಿರ್ಮಾಣದ ಕನಸನ್ನು ನನಸಾಗಿಸುವತ್ತ ಸಾಗುತ್ತಿದ್ದೇವೆ. ನಮ್ಮ ಅಭಿವೃದ್ಧಿ ತತ್ವಗಳು ಬಾಬಾ ಸಾಹೇಬ್ ಅಂಬೇಡ್ಕರ್, ಬಸವಣ್ಣ ಮತ್ತು ಮಹಾತ್ಮ ಗಾಂಧಿಯ ಅವರ ಸಿದ್ಧಾಂತಗಳ ತಳಹದಿಯ ಮೇಲೆ ರೂಪಿತವಾಗಿವೆ ಎಂದು ಸಿಎಂ ಹೇಳಿದರು.

ಅಂಬೇಡ್ಕರ್‌ ಅವರು ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಓದಿದ ಮೊದಲ ಭಾರತೀಯ ಎಂಬ ಕಾರಣಕ್ಕೆ ಅವರ ಹೆಸರನ್ನೇ ಸಂಸ್ಥೆಗೆ ಇಡಲಾಗಿದೆ. ಅಂಬೇಡ್ಕರ್‌ ಜಯಂತಿಯಂದೇ ಕಾರ್ಯಕ್ರಮ ನಡೆದದ್ದು ವಿಶೇಷ ಎಂದರು.

43.35 ಎಕರೆ ಪ್ರದೇಶದಲ್ಲಿ ಈ ಸ್ವಾಯತ್ತ ಸಂಸ್ಥೆ ತಲೆ ಎತ್ತಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ತರಗತಿ ಆರಂಭವಾಗಲಿದ್ದು, ವಿಶ್ವವಿದ್ಯಾಲಯದ ಹಳೇ ಕಟ್ಟಡವನ್ನು ತಾತ್ಕಾಲಿಕವಾಗಿ ಒದಗಿಸಲಾಗಿದೆ.

ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಶಿಕ್ಷಣ ಇಲಾಖೆಗೆ 107 ಕೋಟಿ ರುಪಾಯಿ ಬಿಡುಗಡೆ ಮಾಡಿದ್ದಾರೆ.

No Comments

Leave A Comment