Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಸೂಕ್ತ ಸಾಕ್ಷ್ಯಾಧಾರಗಳ ಮೇಲೆಯೇ ಜಾಧವ್ ಗೆ ಗಲ್ಲು ಶಿಕ್ಷೆ ನೀಡಲಾಗಿದೆ: ಸರ್ತಾಜ್ ಅಜಿಜ್

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಗೂಢಚಾರಿಕೆ ನಡೆಸಿದ ಬಗ್ಗೆ ಮತ್ತು ಭಯೋತ್ಪದಾನೆಯಲ್ಲಿ ಭಾಗಿಯಾಗಿರುವ ಬಗ್ಗೆ ನಂಬಲರ್ಹ ಮತ್ತು ನಿರ್ಧಿಷ್ಟ ಸಾಕ್ಷಾಧಾರಗಳನ್ನು ಆಧರಿಸಿಯೇ ಗಲ್ಲು ಶಿಕ್ಷೆ ನೀಡಲಾಗಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿಗಳ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜಿಜ್ ಅವರು ಶುಕ್ರವಾರ ಹೇಳಿದ್ದಾರೆ.

ನಮ್ಮ ದೇಶದ ಕಾನೂನು ಪ್ರಕಾರವೇ ಜಾಧವ್ ಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿದೆ ಎಂದು ಅಜಿಜ್ ಅವರು, ಭಾರತ-ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಬಿಕ್ಕಟ್ಟು ತಡೆಯಲು ರಾಜತಾಂತ್ರಿಕವಾಗಿ ಹೆಚ್ಚು ಸಕ್ರಿಯವಾಗುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಭಾರತ ನೀಡುತ್ತಿರುವ ಪ್ರತಿಕ್ರಿಯೆಯಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ ಎಂದು ಸರ್ತಾಜ್ ಅಜಿಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವುದೇ ವಿಚಾರಣೆ ಇಲ್ಲದೆ ಪಾಕಿಸ್ತಾನ ಜಾಧವ್ ಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂಬ ಭಾರತದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅಜಿಜ್, ಕುಲಭೂಷಣ್ ಜಾಧವ್ ವಿರುದ್ಧ ಮೊದಲು ಏಪ್ರಿಲ್ 8,2016ರಲ್ಲಿ ಖ್ವೇಟ್ಟಾದಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದಿರ್ಘ ವಿಚಾರಣೆ ನಡೆಸಿಯೇ ಗಲ್ಲು ಶಿಕ್ಷೆ ವಿಧಿಸಿಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಜಾಧವ್ ಗೆ ಕಾನೂನು ಸಹಾಯಕರನ್ನು ಒದಗಿಸಲಾಗಿತ್ತು ಎಂದು ಹೇಳಿದ್ದಾರೆ.

No Comments

Leave A Comment