Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ಮಹಾರಾಷ್ಟ್ರದಲ್ಲಿ ಬೆಳಗಾವಿಯ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು

ಮುಂಬೈ: ಬೀಚ್ ನಲ್ಲಿ ಈಜಲು ತೆರಳಿದ್ದ ಬೆಳಗಾವಿ ಮೂಲದ 8 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲಾದ ದುರಂತ ಶನಿವಾರ ಮಹಾರಾಷ್ಟ್ರದ ಸಿಂಧದುರ್ಗ ಸಮೀಪದ ಮಾಲ್ವಾನ್ ವಾಯರಿ ಬೀಚ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಬೆಳಗಾವಿ ಮರಾಠ ಮಂಡಳದ ಇಂಜಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಹಾರಾಷ್ಟ್ರ ವೈರ್ ಬೀಚ್ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ವಾಯರಿ ಸಮುದ್ರದಲ್ಲಿ ಈಜಲು ತೆರಳಿದ್ದಾಗ 8 ಮಂದಿ ನೀರು ಪಾಲಾಗಿರುವುದಾಗಿ ವರದಿ ವಿವರಿಸಿದೆ.

ಶುಕ್ರವಾರ ಬೆಳಗಾವಿ ಇಂಜಿನಿಯರಿಂಗ್ ಕಾಲೇಜಿನ 40 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ 8 ಮಂದಿ ನೀರು ಪಾಲಾಗಿದ್ದಾರೆ. ಮೂವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಐವರು ವಿದ್ಯಾರ್ಥಿಗಳ ಹಾಗೂ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

No Comments

Leave A Comment