Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಬಿಜೆಪಿ ವಿಧಾನ ಪರಿಷತ್ ಸದಸ್ಯೆ ವಿಮಲಾಗೌಡ ಹೃದಯಾಘಾತದಿಂದ ನಿಧನ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯೆ ಹಾಗೂ ಮೇಲ್ಮನೆ ಮಾಜಿ ಉಪ ಸಭಾಪತಿ ವಿಮಲಾಗೌಡ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೃದ್ರೋಗ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 63 ವರ್ಷದ ವಿಮಲಾಗೌಡ ಅವರನ್ನು ಒಂದು ತಿಂಗಳ ಹಿಂದೆ ನಗರದ ನಾರಾಯಾಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಲಕ್ಷ್ಮಿನಾರಾಯಣ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

1955ರ ನವೆಂಬರ್ 20ರಂದು ಬೆಂಗಳೂರಿನಲ್ಲಿ ಜನಿಸಿದ ವಿಮಲಾಗೌಡ ಅವರು 1980ರಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ವಿಮಲಾಗೌಡ ಅವರು ಮೂರನೇ ಮಹಿಳಾ ಉಪ ಸಭಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ.

No Comments

Leave A Comment