Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಕಾಶ್ಮೀರದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ: ಕಲ್ಲು ತೂರಾಟದಲ್ಲಿ 12 ಜನರಿಗೆ ಗಾಯ

ಕಾಶ್ಮೀರ: ಉಗ್ರ ಬುರ್ಹಾನ್ ವಾನಿ ಹತ್ಯೆ ಪ್ರಕರಣ ಸಂಬಂಧ ಸಾಕಷ್ಟು ಸುಧೀರ್ಘ ಹಿಂಸಾಚಾರಗಳನ್ನು ಎದುರಿಸಿದ್ದ ಕಾಶ್ಮೀರದಲ್ಲಿ ಇದೀಗ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಭದ್ರತಾ ಸಿಬ್ಬಂದಿಗಳ ಮೇಲೆ ವಿದ್ಯಾರ್ಥಿಗಳು ನಡೆಸಿದ ಕಲ್ಲು ತೂರಾಟದಲ್ಲಿ 12 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.

ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಿರುವ ಹಿನ್ನಲೆಯಲ್ಲಿ ಕೆಲ ವಿದ್ಯಾರ್ಥಿ ಸಂಘಟನೆಗಳು ಕಾಶ್ಮೀರ ವಿವಿಧೆಡೆ ಶನಿವಾರ ಪ್ರತಿಭಟನೆಗಳನ್ನು ನಡೆಸುತ್ತಿದ್ದವು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು.

ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದ ವಿದ್ಯಾರ್ಥಿಗಳು ನಿನ್ನೆ ಕೂಡ ಶ್ರೀನಗರ, ಬಂಡಿಪೊರ, ಬಾರಾಮುಲ್ಲಾ, ಅನಂತ್ ನಾಗ್, ಪುಲ್ವಾಮಾ, ಕುಪ್ವಾರ, ಕುಲ್ಗಾಮ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಕೆಲ ವಿದ್ಯಾರ್ತಇಗಳು ಭದ್ರತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಪೇದೆ ಹಾಗೂ 12 ಮಂದಿ ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವಂತೆ ಸೂಚಿಸಲಾಗಿತ್ತು. ಸೂಚನೆಯನ್ನು ಯಾರು ಕೇಳಿರಲಿಲ್ಲ. ಬದಲಾಗಿ ಭದ್ರತಾ ಸಿಬ್ಬಂದಿಗಳ ಮೇಲೆಯೇ ಕಲ್ಲು ತೂರಾಟ ನಡೆಸಿದ್ದರು. ಇದು ಘರ್ಷಣೆಗೆ ಕಾರಣವಾಗಿತ್ತು. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಭದ್ರತಾ ಸಿಬ್ಬಂದಿಗಳ ಅಶ್ರುವಾಯು ಪ್ರಯೋಗಿಸಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರತಿಭಟನೆಗೆ ಶ್ರೀನಗರದ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳೂ ಕೂಡ ಸಾಥ್ ನೀಡಿದ್ದರು. ಇದು ಪ್ರತಿಭಟನೆ ಹತ್ತಿಕ್ಕಲು ಮತ್ತಷ್ಟು ಸಮಸ್ಯೆಯನ್ನು ಎದುರು ಮಾಡಿತ್ತು. ಹಿಂಸಾಚಾರ ಹಿನ್ನಲೆಯಲ್ಲಿ ರೆಸೆಡೆನ್ಸಿ ರಸ್ತೆ ಮತ್ತು ಲಾಲ್ ಚೌಕ್ ಪ್ರದೇಶದಲ್ಲಿರುವ ಮಾರುಕಟ್ಟೆಗಳು ಬಂದ್ ಆಗಿದ್ದವು ಎಂದು ಮೂಲಗಳು ತಿಳಿಸಿವೆ.

No Comments

Leave A Comment