Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಬಂಟ್ವಾಳ : ಗ್ರಾ.ಪಂ.ಉಪಾಧ್ಯಕ್ಷ ಜಮೀಲ್‌ ಕರೋಪಾಡಿ ಬರ್ಬರ ಹತ್ಯೆ


ಬಂಟ್ವಾಳ :
ಇಲ್ಲಿನ ಕರೋಪಾಡಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ,ಕಾಂಗ್ರೆಸ್‌ ಮುಖಂಡ ಎ ಅಬ್ದುಲ್‌ ಜಮೀಲ್‌ ಕರೋಪಾಡಿ(40)  ಅವರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ. ಕತ್ತಿನ ಭಾಗದಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ.

ಸ್ಥಳಕ್ಕೆ ಪೊಲೀಸರ ತಂಡ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಜಮೀಲ್‌ ತಂದೆ ಉಸ್ಮಾನ್‌ ಅವರು ತಾಲೂಕು ಪಂಚಾಯತ್‌ ಸದಸ್ಯರಾಗಿದ್ದಾರೆ.

ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment