Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಕೋಲ್ಕತಾ: ಚಲಿಸುತ್ತಿರುವ ವಾಹನದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೋಲ್ಕತಾ: ಚಲಿಸುತ್ತಿರುವ ವಾಹನದಲ್ಲೇ ಅಪ್ರಾಪ್ತಯ ಮೇಲೆ ದುಷ್ಕರ್ಮಿಗಳ ಗುಂಪೊಂದು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಶುಕ್ರವಾರ ನಡೆದಿದೆ.

ದಕ್ಷಿಣ ಕೋಲ್ಕತಾದ ಗರಿಯಾಹತ್ ಪ್ರದೇಶ ಈ ಘಟನೆ ನಡೆದಿದ್ದು, ಪ್ರಸ್ತುತ ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸುತ್ತಿದ್ದಾರೆ.

ನಿನ್ನೆ ಸಂಜೆ ಸುಮಾರು 7.30ರ ಸಮಯದಲ್ಲಿ ದಾರಿಯಲ್ಲಿ ನಡೆದು ಹೋಗುತ್ತಿದ್ದ ಅಪ್ರಾಪ್ತೆಯ ಬಳಿ ತೆರಳಿದ ದುಷ್ಕರ್ಮಿಗಳು ಆಕೆಗೆ ಚಾಕೊಲೇಟ್ ನೀಡಲು ಮುಂದಾಗಿದ್ದಾರೆ. ಬಳಿಕ ಆಕೆಯನ್ನು ವಾಹನದಲ್ಲಿ ಅಪಹರಿಸಿ ಚಲಿಸುತ್ತಿರುವ  ವಾಹನದಲ್ಲೇ ಸಾಮೂಹಿಕವಾಗಿ ಅತ್ಯಾಚಾರ ಗೈದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಘಟನೆ ನಡೆದಿದೆ ಎಂದು ಹೇಳಲಾಗುತ್ತಿರುವ ವಾಹನ ಮತ್ತು ಶಂಕಿತ ಆರೋಪಿಯೋರ್ವನನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ.  ಅಂತೆಯೇ ಉಳಿದ ದುಷ್ಕರ್ಮಿಗಳ ಬಂಧನಕ್ಕಾಗಿ ವ್ಯಾಪಕ ಬಲೆ ಬೀಸಿದ್ದಾರೆ.

No Comments

Leave A Comment