Log In
BREAKING NEWS >
ಉಡುಪಿಯ ಹಲವು ಕಡೆಗಳಲ್ಲಿ ಕೈ ಕೊಟ್ಟ ಮತಯ೦ತ್ರ-ಮತದಾನಕ್ಕೆ ಪರದಾಟುವ ಪರಿಸ್ಥಿತಿ....

ಪ್ರಧಾನಿ ಮೋದಿ ಜೊತೆ ಮಾತನಾಡುತ್ತೇನೆ, ಪ್ರತಿಭಟನೆ ಹಿಂಪಡೆಯಿರಿ: ರೈತರಿಗೆ ಪಳನಿಸ್ವಾಮಿ ಮನವಿ

ನವದೆಹಲಿ: ಬರ ಪರಿಹಾರ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸುತ್ತೇನೆ, ಪ್ರತಿಭಟನೆಯನ್ನು ಹಿಂಪಡೆಯಿರಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಯವರು ಭಾನುವಾರ ರೈತರಿಗೆ ಮನವಿ ಮಾಡಿದ್ದಾರೆ.

ತಮಿಳುನಾಡು ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲ ಮತ್ತು ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆ ಮಾಡದ್ದರಿಂದ ಬಹುಪಾಲು ರೈತರಿಗೆ ಬೆಳೆ ನಷ್ಟವುಂಟಾಗಿತ್ತು. ಇದರಿಂದ ನೊಂದ ರೈತರು ಕಳೆದ 39 ದಿನಗಳಿಂದರೂ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ರೈತರೂ ನಡೆಸಿದ್ದ ಪ್ರತಿಭಟನೆ ಸಾಕಷ್ಟು ತೀವ್ರತೆಯನ್ನು ಪಡೆದುಕೊಂಡಿತ್ತು. ಸರ್ಕಾರದ ಗಮನ ಸೆಳೆಯುವ ಸಲುವಾಗಿ ರೈತರು ಮೂತ್ರವನ್ನೇ ಕುಡಿದಿದ್ದರು. ಅಲ್ಲದೆ, ಸೀರೆ ಉಟ್ಟು, ಸತ್ತ ಇಲಿಗಳನ್ನು ತಿಂದು ಅರೆನಗ್ನವಾಗಿ ಕುಳಿತು ಸತ್ತ ರೈತರ ತಲೆಬುರುಡೆಗಳನ್ನು ಕುತ್ತಿಗೆಗೆ ನೇತಾಕಿಕೊಂಡಿದ್ದರು.

ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಪಳನಿಸ್ವಾಮಿಯವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಸಮಸ್ಯೆಯನ್ನು ವಿವರಿಸುತ್ತೇನೆ. ರೈತರು ತಮ್ಮ ಪ್ರತಿಭಟನೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಮನವಿ ಮಾಡಿದ್ದಾರೆ.

ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರೈತ ಅಯ್ಯಕಾನು ಅವರು, ಕೂಡಲೇ ಕೇಂದ್ರ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಬೇಕು. ಇತ್ತೀಚೆಗಷ್ಟೇ ಉತ್ತರಪ್ರದೇಶ ರೈತರ ಸಾಲವನ್ನು ಮನ್ನಾ ಮಾಡಲಾಗಿತ್ತು. ನಮ್ಮ ರೈತರ ಕೇಂದ್ರ ಮನ್ನಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಕೇಂದ್ರ ಸರ್ಕಾರ ತಮಿಳುನಾಡು ರೈತರ ಸಾಲ ಮನ್ನಾ ಮಾಡಲು ರೂ.40,000 ಕೋಟಿ ಬರ ಬರಿಹಾರ ಪ್ಯಾಕೇಜ್ ನ್ನು ಘೋಷಣೆ ಮಾಡಬೇಕು. ಅಲ್ಲದೆ, ಕಾವೇರಿ ನಿರ್ವಹಣಾ ಮಂಡಳಿ ಕೇಂದ್ರವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

No Comments

Leave A Comment