Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭಕ್ಕೆ ಕ್ಷಣಗಣನೆ....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ;೧೧೮ನೇ ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

ಮಕ್ಕಳ ಹಕ್ಕು ಪರಿಣಾಮಕಾರಿಯಾಗಿ ಜಾರಿ ಆಗುತ್ತಿಲ್ಲ- ಜಿಲ್ಲಾ ನ್ಯಾಯಾಧೀಶರು

ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳಿದ್ದರೂ ಸಹ ಅವುಗಳು ಪರಿಣಾಮಕಾರಿಯಾಗಿ ಅನುಷ್ಠಾನ ಆಗುತ್ತಿಲ್ಲ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ ನಾಯ್ಕ ಅಭಿಪ್ರಾಯಪಟ್ಟಿದ್ದಾರೆ.

ಅವರು ಶನಿವಾರ ನಿಟ್ಟೂರಿನ ಬಾಲಕಿಯರ ಬಾಲ ಮಂದಿರದಲ್ಲಿ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ಆಯೋಜಿಸಿದ್ದ ವಸಂತೋತ್ಸವ-ಚಿಣ್ಣರ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ರಕ್ಷಣೆಗಾಗಿ ಇರುವ ಪೋಕ್ಸೋ ಕಾಯಿದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ಸಂಬಂದಿಸಿದಂತೆ, ಸಂತ್ರಸ್ಥ ಮಗುವಿಗೆ ಸೂಕ್ತ ವೈದ್ಯಕೀಯ ಪರೀಕ್ಷೆ, ಚಿಕಿತ್ಸೆ ಹಾಗೂ ಪ್ರಕರಣ ಕುರಿತು ಸಂಗ್ರಹಿಸುವ ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಕಾಯಿದೆಯ ಪರಿಣಾಮಕಾರಿ ಅನುಷ್ಠಾನ ಆಗುತ್ತಿಲ್ಲ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ಮಕ್ಕಳ ರಕ್ಷಣೆ ಹಾಗೂ ಬೆಳವಣಿಗೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು.
ವಸಂತ ಮಾಸದಲ್ಲಿ ಮಕ್ಕಳು ಮಣ್ಣಿನಲ್ಲಿ ಆಟವಾಡಿ, ಮಣ್ಣಿನ ಸ್ವಾದವನ್ನು ಆಸ್ವಾದಿಸಬೇಕು, ಪ್ರತಿ ಮಗುವೂ ಸಸಿಗಳನ್ನು ನೆಡುವುದನ್ನು ರೂಢಿ ಮಾಡಿಕೊಂಡು ಭೂಮಿಯ ರಕ್ಷಣೆ ಮಾಡಬೇಕು ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.

ಮಕ್ಕಳ ರಕ್ಷಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ, ಉಡುಪಿ ಪೊಲೀಸ್ ಇಲಾಖೆಯ ಎ.ಎಸೈ ಮುಕ್ತಾ ಬಾಯಿ ಮತ್ತು ಕಾರ್ಕಳ ಟಿ.ಎಂ.ಎ. ಪೈ ಆಸ್ಪತ್ರೆಯ ಡಾ. ಸತೀಶ್ ನಾಯಕ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಲತಾ, ಹೆಚ್ಚುವರಿ ಪೊಲೀಶ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ರೋಟರಿಯ ಅಸಿಸ್ಟೆಂಟ್ ಗವರ್ನರ್ ರೋ.ಸುಬ್ರಹ್ಮಣ್ಯ ಬಾಸ್ರಿ, ಸ್ವಪ್ನಾ ಗಣೇಶ್ ಉಪಸ್ಥಿತರಿದ್ದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಬಿ.ಕೆ. ನಾರಾಯಣ ಸ್ವಾಗತಿಸಿದರು. ಅಣ್ಣಯ್ಯ ನಿರೂಪಿಸಿದರು.

No Comments

Leave A Comment