Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಹಯಾತ್ಪೊರ ಗ್ರಾಮದಲ್ಲಿ ಉಗ್ರರು ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ 53 ರಾಷ್ಟ್ರೀಯ ರೈಫಲ್ಸ್ ಪಡೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆ ಇಬ್ಬರನ್ನು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ, ಸೇನಾಪಡೆ ತನ್ನ ಕಾರ್ಯಾಚರಣೆಯನ್ನು ಚುರುಕುಗೊಳಿಸಿತ್ತು. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹತ್ಯೆಯಾದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರನನ್ನು ಯೂನಿಸ್ ಮಕ್ಬೂಲ್ ಗನೈ ಎಂದು ಗುರ್ತಿಸಲಾಗಿದ್ದು, ಈತ ಛದೂರ್’ನ ಪತ್ರಿಗಾಮ್ ನಿವಾಸಿಯಾಗಿದ್ದಾರೆ. ಮತ್ತೊಬ್ಬ ಉಗ್ರನ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಹತ್ಯೆಯಾದ ಉಗ್ರರಿಂದ ಎಕೆ.47 ರೈಫಲ್ ಗಳು ಹಾಗೂ ಸ್ಫೋಟಕ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

No Comments

Leave A Comment