Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಚುನಾವಣಾ ಆಯೋಗಕ್ಕೆ ಲಂಚ ಆರೋಪ: ದೆಹಲಿ ಪೊಲೀಸರಿಂದ ಟಿಟಿವಿ ದಿನಕರನ್ ಬಂಧನ

ನವದೆಹಲಿ: ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ,ಸತತ ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ ಪೊಲೀಸರು ಎಐಎಡಿಎಂಕೆ (ಅಮ್ಮ) ಪಕ್ಷದ ನಾಯಕ ಟಿಟಿವಿ ದಿನಕರನ್ ಅವರನ್ನು ಮಂಗಳವಾರ ಮಧ್ಯರಾತ್ರಿ ಅರೆಸ್ಟ್ ಮಾಡಿದ್ದಾರೆ.

ದಿನಕರನ್ ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಆಪ್ತ ಮಲ್ಲಿಕಾರ್ಜುನ ಅವರನ್ನೂ ಸಹ ಬಂಧಿಸಲಾಗಿದೆ. ಬುಧವಾರ ಮಧ್ಯಾಹ್ನ ಬಂಧಿತರನ್ನು ಕೋರ್ಟ್​ಗೆ ಹಾಜರು ಪಡಿಸಲಾಗುವುದು, ದೆಹಲಿ ಪೊಲೀಸರು ದಿನಕರನ್,  ಸುಖೇಶ್ ಚಂದ್ರ ಶೇಖರ್ ನನ್ನು ಒಟ್ಟಿಗೆ ವಿಚಾರಣೆಗೆ ಒಳಪಡಿಸಿ ಲಂಚ ನೀಡಲು ಪ್ರಯತ್ನಿಸಿದ ಆರೋಪದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಿದರು.

ದಿನಕರನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಎಏಐಎಡಿಎಂಕೆ(ಅಮ್ಮಾ) ವಕ್ತಾರ ಪುಗಳೇಂದಿ ಈ ಪ್ರಕರಣ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಎಲ್ಲಾ ವ್ಯವಹಾರಗಳನ್ನು ದಿನಕರನ್ ನಿಷ್ಠೆಯಿಂದ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಅವರಿಗೆ ಜಾಮೀನು ಪಡೆಯಲು ನಾವು ಅಪೀಲು ಹೋಗುತ್ತೇವೆ ಎಂದು ಹೇಳಿದ್ದಾರೆ.

ಎಲ್ಲಾ ಆರೋಪಗಳು ದಿನಕರನ್ ವಿರುದ್ಧವೇ ಇವೆ. ಆತಕನ ವಿರುದ್ಧ ಏಕೆ ಯಾವ ಕ್ರಮಗಳನ್ನು ಜರುಗಿಸಿಲ್ಲ ಎಂದು ನ್ಯಾಯಾಧೀಶ ಪೂನಂ ಚೌಧುರಿ ದೆಹಲಿ ಕ್ರೈಂ ಬ್ರಾಂಚ್ ನ ಪೊಲೀಸ್ ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ ಸುಖೇಶ್ ಚಂದ್ರಶೇಖರ್ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಿದೆ.

No Comments

Leave A Comment