Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ವಿಜಯಪುರದಲ್ಲಿ ಕ್ರೂಸರ್‌ ಪಲ್ಟಿ : ನಾಲ್ವರ ಸಾವು, ನಾಲ್ವರು ಗಂಭೀರ

ವಿಜಯಪುರ : ಜಿಲ್ಲೆಯ ಸಿಂದಗಿ ತಾಲೂಕಿನ ದೇವರ ಹಿಪ್ಪರಗಿಯಲ್ಲಿ ಬುಧವಾರ ಬೆಳಗ್ಗೆ ಕ್ರೂಸರ್‌ ವಾಹನ ಪಲ್ಟಿಯಾಗಿ  ಓರ್ವ ಮಹಿಳೆ ಸೇರಿದಂತೆ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬನಹಟ್ಟಿ ಯವರು ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ್ದೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೇವರ ಹಿಪ್ಪರಗಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment