Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ದೆಹಲಿ ಪಾಲಿಕೆ ಚುನಾವಣೆ: ಸ್ಪಷ್ಟ ಬಹುಮತದತ್ತ ಬಿಜೆಪಿ, ಮುಗ್ಗರಿಸಿದ ಆಪ್, ಕಾಂಗ್ರೆಸ್

ನವದೆಹಲಿ: ದೆಹಲಿಯ ಮೂರು ಮಹಾನಗರ ಪಾಲಿಕೆಗಳ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ನಿರೀಕ್ಷೆಯಂತೆಯೇ ಬಿಜೆಪಿ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಕಳೆದ 14 ವರ್ಷಗಳಿಂದಲೂ ದೆಹಲಿ ಮಹಾನಗರ ಪಾಲಿಕೆಯ ಗದ್ದುಗೆಯನ್ನು ಬಿಜೆಪಿ ತನ್ನ ಹಿಡಿತದಲ್ಲಿಟ್ಟುಕೊಂಡಿದ್ದು, ಈ ಬಾರಿಯ ಎಂಸಿಡಿ ಗದ್ದುಗೆ ಯಾರ ಪಾಲಿಕೆ ಎಂಬುದು ಮಧ್ಯಾಹ್ನದ ಹೊತ್ತಿಗೆ ಬಹಿರಂಗಗೊಳ್ಳಲಿದೆ.

ನಿರೀಕ್ಷೆಯಂತೆಯೇ ಬಿಜೆಪಿ ಭರ್ಜರಿ ಮುನ್ನಡೆಯಲ್ಲಿ ಸಾಗುತ್ತಿದ್ದು, ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 2ನೇ ಸ್ಥಾನ ಹಾಗೂ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ.

ದೆಹಲಿಯು 3 ಮಹಾನಗರ ಪಾಲಿಕೆಗಳಲ್ಲಿ ಒಟ್ಟು 272 ವಾರ್ಡ್ ಗಳನ್ನು ಹೊಂದಿದ್ದು, ಏಪ್ರಿಲ್ 23 ರಂದು ನಡೆದ ಚುನಾವಣೆಯಲ್ಲಿ ಶೇ.54ರಷ್ಟು ಮತದಾನವಾಗಿತ್ತು.

ಪ್ರಸ್ತುತ ಇರುವ ಅಂಕಿ ಅಂಶಗಳ ಪ್ರಕಾರ ಬಿಜೆಪಿ ಭರ್ಜರಿ ಮೇಲುಗೈ ಸಾಧಿಸಿದ್ದು, ಸತತ ಮೂರನೇ ಬಾರಿ ಆಡಳಿತದ ಚುಕ್ಕಾಣಿ ಹಿಡಿಯುವತ್ತ ಮುನ್ನುಗ್ಗಿದೆ. 2ನೇ ಸ್ಥಾನಕ್ಕಾಗಿ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.

ಪ್ರಧಾನಿ ಮೋದಿಯವರ ಅಲೆಯ ನಡುವೆಯೂ ಪಾಲಿಕೆ ಚುನಾವಣೆಯಲ್ಲಿ ಬಹುಮತ ಗಳಿಸುವ ವಿಶ್ವಾದಲ್ಲಿದ್ದ ಕೇಜ್ರಿವಾಲ್ ಅವರ ಲೆಕ್ಕಾಚಾರ ತಲೆಕೆಳಗಾಗಿದ್ದು, ತೀವ್ರ ಮುಖಭಂಗವಾಗಿದೆ. 270 ಸ್ಥಾನಗಳ ಪೈಕಿ ಬಿಜೆಪಿ 181, ಆಮ್ ಆದ್ಮಿ ಪಕ್ಷ 46, ಕಾಂಗ್ರೆಸ್ 31 ಮತ್ತು ಇತರ ಪಕ್ಷಗಳು 12 ಮುನ್ನಡೆ ಸಾಧಿಸಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 7 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಬಾಚಿಕೊಂಡಿತ್ತು. 2015ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿತ್ತು. ಆದರೆ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಗಳಿಸಲಿದೆ ಎಂದು ಈ ಹಿಂದೆ ಮತಗಟ್ಟೆ ಸಮೀಕ್ಷೆಗಳು ಹೇಳಿತ್ತು. ಇದರಂತೆ ನಿರೀಕ್ಷೆಯಂತೆಯೇ ಬಿಜೆಪಿ ಸ್ಪಷ್ಟ ಬಹುಮತ ಸಾಬೀತುಪಡಿಸಿದೆ.

No Comments

Leave A Comment