Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಬಾಲಿವುಡ್ ಹಿರಿಯ ನಟ ವಿನೋದ್ ಖನ್ನಾ ವಿಧಿವಶ

ಮುಂಬೈ: ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ವಿನೋದ್ ಖನ್ನಾ ವಿಧಿವಶರಾಗಿದ್ದಾರೆ.

ನಿರ್ಜಲೀಕರಣದಿಂದ ಬಳಲುತ್ತಿದ್ದ 70 ವರ್ಷದ ವಿನೋದ್ ಖನ್ನಾ ಅವರು ಮುಂಬೈನ ಸರ್ ಹೆಚ್’ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಚಿಕಿಕ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿನೋದ್ ಖನ್ನಾ ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ.

ಖನ್ನಾ ಅವರು ಹಿಂದಿಯ ಬ್ಲಾಕ್ ಬಸ್ಟರ್ ಚಿತ್ರಗಳಾದ ಅಮರ್ ಅಕ್ಬರ್ ಆಂಥೋನಿ, ದಯವಾನ್, ಮೇರಾ ಗಾನ್ ಮೇರಾ ದೇಶ್ ಚಿತ್ರಗಳು ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

No Comments

Leave A Comment