Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

2 ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ: 26 ಜನರ ಸಾವು

ಲಾಗೋಸ್: ಪಶ್ಚಿಮ ನೈಜೀರಿಯಾದ ಹೆದ್ದಾರಿಯೊಂದರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 26 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ಭಾನುವಾರ ನಡೆದಿದೆ.

ನೈಜೀರಿಯಾದ ಲಾಗೋಸ್-ಐಬಡಾನ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಎರಡು ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ ಎರಡು ಬಸ್ ನಲ್ಲಿದ್ದ ಸುಮಾರು 26 ಪ್ರಯಾಣಿಕರು ಸಜೀವ ದಹನವಾಗಿದ್ದಾರೆಂದು ವರದಿಗಳು ತಿಳಿಸಿವೆ.

ಬಸ್ ನಲ್ಲಿ ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ಕೆಲ ಪ್ರಯಾಣಿಕರು ಬಸ್ ನಿಂದ ಹೊರ ಓಡಿ ಬಂದಿದ್ದಾರೆ. ಆದರೆ. 26 ಪ್ರಯಾಣಿಕರು ಹೊರಲು ಸಾಧ್ಯವಾಗಿದೆ ಸಜೀವವಾಗಿ ದಹನವಾಗಿದ್ದಾರೆ. ಬಸ್ ನಲ್ಲಿ ಮಕ್ಕಳು ಸೇರಿದಂದೆ ಕೆಲವರಿಗೆ ತೀವ್ರವಾಗಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Comments
  • Pak dhushkruthyakke Bharathiya sainnya thakka paata kalisidhe.I LIKE IT VERY RY MUCH.THANK YOU.

    May 8, 2017

Leave A Comment