Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಯು. ಉಪೇಂದ್ರರ ನಿಧನ -ಯಕ್ಷಗಾನ ಕಲಾರಂಗ-ರ೦ಗಭೂಮಿ ಕಲಾವಿದರ ಸಂತಾಪ

ಉಡುಪಿ : 08/05/2017 ರಂದು ನಿಧನ ಹೊಂದಿದ ಉಡುಪಿ ಎಲ್. ಐ. ಸಿ ಯಲ್ಲಿ ಅಧಿಕಾರಿಯಾಗಿ ನಿವೃತ್ತಿ ಹೊಂದಿದ ನಂತರ ಸಮಾಜಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಉಡುಪಿ ರಂಗಭೂಮಿಯ ಉಪಾಧ್ಯಕ್ಷರಾಗಿ, ಕಳೆದ ನಾಲ್ಕು ದಶಕಗಳಿಂದ ಯಕ್ಷಗಾನ ಕಲಾರಂಗದ ಕಾರ್ಯಕಾರೀ ಸಮಿತಿಯ ಸದಸ್ಯರಾಗಿ ಸಕ್ರೀಯ ಸೇವೆ ಸಲ್ಲಿಸಿದ ಯು. ಉಪೇಂದ್ರ(80 ವರ್ಷ) ಅವರ ನಿಧನಕ್ಕೆ ಉಡುಪಿಯ ಯಕ್ಷಗಾನ ಕಲಾರಂಗವು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಅವರು ಯಕ್ಷಗಾನ ಕಲಾರಂಗ ಕೊಡಮಾಡುವ ಯಕ್ಷಚೇತನ ಪ್ರಶಸ್ತಿಗೂ ಭಾಜನರಾಗಿದ್ದರು. ಅವರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ್ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್,ರ೦ಗಭೂಮಿಯ ಡಾ.ಅರವಿ೦ದ ನಾಯಕ್ ಅಮ್ಮು೦ಜೆರವರು ಕೃತಜ್ಷತೆಯಿಂದ ಸ್ಮರಿಸಿ, ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸಿದ್ದಾರೆ.

No Comments

Leave A Comment