Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಮೊದಲ ಸಭೆಯಲ್ಲಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ ಕೈ ಉಸ್ತುವಾರಿ ವೇಣುಗೋಪಾಲ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಕೆಸಿ ವೇಣುಗೋಪಾಲ್ ಪಕ್ಷದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದು, ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಅಭಿಪ್ರಾಯ ಸಂಗ್ರಹಣೆಯಲ್ಲಿ ನಿರತರಾಗಿದ್ದಾರೆ.

ಅಭಿಪ್ರಾಯ ಸಂಗ್ರಹಣೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಉಸ್ತುವಾರಿ ವೇಣುಗೋಪಾಲ್, ಪಕ್ಷದಲ್ಲಿ ಭಿನ್ನಾಭಿಪ್ರಾಯ ಇದೆ. ಭಿನ್ನಾಭಿಪ್ರಾಯ ಇರುವುದು ಸಹಜ. ಅದನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ಬಾರದಂತೆ ಮಾಡುವುದು ಹಾಗೂ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ಪ್ರತಿಯೊಬ್ಬ ಪದಾಧಿಕಾರಿಗೂ 10 ನಿಮಿಷಗಳ ಕಾಲಾವಕಾಶ ನೀಡಿ ಮುಂದಿನ ಚುನಾವಣೆಗೆ ರೂಪಿಸಬೇಕಾದ ಕಾರ್ಯತಂತ್ರ, ಸರ್ಕಾರಿ ಯೋಜನೆಗಳು ಜನರಿಗೆ ತಲುಪುತ್ತಿವೆಯೇ ಹಾಗೂ ಸಿದ್ದರಾಮಯ್ಯ ಅವರ ಆಡಳಿತ ಹೇಗಿದೆ ಎಂಬ ಬಗ್ಗೆ ಪ್ರತಿಯೊಬ್ಬರಿಂದಲೂ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ.

ಅಭಿಪ್ರಾಯ ಸಂಗ್ರಹಣೆ ವೇಳೆ ಹಲವು ಪದಾಧಿಕಾರಿಗಳು ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯದ ಓಟ್ ಬ್ಯಾಂಕ್ ನ್ನು ಭದ್ರಪಡಿಸಿಕೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ನೇಮಕದ ಕುರಿತು ವೇಣುಗೋಪಾಲ್ ಅವರು ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಶೀಘ್ರವೇ ನೂತನ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಬೇಕೆಂಬ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೇ.10 ರಂದು ಕಾಂಗ್ರೆಸ್ ಹೈಕಮಾಂಡ್ ತಂಡ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಬಗ್ಗೆ ಅಭಿಪ್ರಾಯ ಸಂಗ್ರಹಣೆ ಮಾಡಲಿದೆ.

No Comments

Leave A Comment