Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಸಿಜೆಐಗೆ ಶಿಕ್ಷೆ ವಿಧಿಸಿದ್ದ ನ್ಯಾ.ಕರ್ಣನ್ ಗೆ 6 ತಿಂಗಳ ಜೈಲುಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ದೇಶದಲ್ಲೇ ಮೊದಲು ಎಂಬಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಕ್ಷೆ ವಿಧಿಸಿ ಅಚ್ಚರಿಗೆ ಕಾರಣವಾಗಿದ್ದ ನ್ಯಾಯಮೂರ್ತಿ ಸಿಎಸ್ ಕರ್ಣನ್  ಅವರಿಗೆ ಸುಪ್ರೀಂ ಕೋರ್ಟ್ ತಿಂಗಳ ಜೈಲ ಶಿಕ್ಷೆ ವಿಧಿಸಿ  ಆದೇಶ ಹೊರಡಿಸಿದೆ.ಈಗಾಗಲೇ ಸುಪ್ರೀಂ ಕೋರ್ಟ್ ನಿಂದ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಸಿಎಸ್ ಕರ್ಣನ್ ಅವರು, ನಿನ್ನೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್  ಹಾಗೂ ಇತರೆ 7 ಮಂದಿ ನ್ಯಾಯಾಧೀಶರಿಗೆ ಐದು ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರು.ದಂಡ ವಿಧಿಸಿ ಸುಪ್ರೀಂಕೋರ್ಟ್ ನ ಕೆಂಗಣ್ಣಿಗೆ ತುತ್ತಾಗಿದ್ದರು. ಅದರ ಪರಿಣಾಮ ಎಂಬಂತೆ ಇದೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕರ್ಣನ್ ಅವರಿಗೆ 6 ತಿಂಗಳ ಸೆರೆವಾಸ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಾಂಗ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತಂತೆ ಟೀಕೆ ಮಾಡಿ, ನ್ಯಾಯಾಧೀಶರ ಬಗ್ಗೆ ಟೀಕೆ ಮಾಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಸಿಎಸ್ ಕರ್ಣನ್ ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ಹಾಗೂ ಇತರೆ 6 ಮಂದಿ ನ್ಯಾಯಾಧೀಶರಾದ ನ್ಯಾಯಮೂರ್ತಿ ದಿಪಾಕ್ ಮಿಶ್ರಾ, ನ್ಯಾಯಮೂರ್ತಿ ಜೆ. ಚೆಲಮೇಶ್ವರ್, ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿ ಮದನ್ ಬಿ. ಲೋಕೂರ್, ಜಸ್ಟೀಸ್ ಪಿನಾಕಿ ಚಂದ್ರ ಘೋಶ್ ಮತ್ತು ಜಸ್ಟಿಸ್ ಕುರಿಯನ್ ಜೋಸೆಫ್ ಅವರ ವಿರುದ್ಧ ಎಸ್ಸಿ / ಎಸ್ಟಿ ದೌರ್ಜನ್ಯ ಕಾಯ್ದೆ 1989 ಮತ್ತು 2015 ರ ತಿದ್ದುಪಡಿ ಕಾಯಿದೆಯ ಅಡಿಯಲ್ಲಿ ಶಿಕ್ಷೆ ವಿಧಿಸಿದ್ದರು.

No Comments

Leave A Comment