Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಪಾಕ್ ಗೆ ಮುಖಭಂಗ: ಕುಲಭೂಷಣ್ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ನ್ಯಾಯಾಲಯದ ತಡೆಯಾಜ್ಞೆ

ನವದೆಹಲಿ: ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದರಿಂದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.

ವಿಯೆನ್ನಾ ಒಪ್ಪಂದ ಪ್ರಕಾರ ಜಾಧವ್ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದಕ್ಕೆ ಪಾಕ್ ಯಾವುದೇ ರೀತಿಯ ಅವಕಾಶ ನೀಡಿಲ್ಲ ಅಂತಾರಾಷ್ಟ್ರೀಯ ನ್ಯಾಯಾಲಯದಿಂದ ಮುಂದಿನ ಸೂಚನೆ ಬರುವವರೆಗೆ ಜಾಧವ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಕೋರ್ಟ್ ಸೂಚಿಸಿದೆ.

ಕುಲಭೂಷಣ್ ಜಾಧವ್ ಮೇಲೆ ಪಾಕಿಸ್ತಾನ ಬೇಹುಗಾರಿಕೆ ಆರೋಪ ಹೊರಿಸಿ ಮಿಲಿಟರಿ ಕೋರ್ಟ್​ನಲ್ಲಿ ಗಲ್ಲುಶಿಕ್ಷೆ ವಿಧಿಸಿತ್ತು. ಭಾರತದ ಮೇಲ್ಮನವಿ ಪುರಸ್ಕರಿಸಿರುವ ನೆದರ್​ಲ್ಯಾಂಡ್ಸ್​ನ ಹೇಗ್​ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಜಾಧವ್ ಗಲ್ಲು ಶಿಕ್ಷೆ ತಡೆಹಿಡಿಯುವಂತೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್​ಗೆ ಪತ್ರದ ಮೂಲಕ ಸೂಚಿಸಿದೆ.

ಜಾಧವ್ ಗಲ್ಲು ಶಿಕ್ಷೆಗೆ ತಡೆ ನೀಡಿರುವ ವಿಚಾರವನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಜಾಧವ್ ಅವರ ತಾಯಿಗೆ ತಿಳಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಜಾಧವ್ ಭೇಟಿಗೆ ಅವಕಾಶ ಕೋರಿ ರಾಜತಾಂತ್ರಿಕ ವಿಧಾನಗಳ ಮೂಲಕ 16 ಬಾರಿ ಯತ್ನಿಸಿತ್ತು. ಪಾಕಿಸ್ತಾನದಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಜಾಧವ್ ಭೇಟಿಗೆ ಅವಕಾಶ ಕೋರಿದ್ದರೂ, ಈ ಮನವಿಯನ್ನು ತಿರಸ್ಕರಿಸಿತ್ತು.

ಜಾಧವ್ ವಿರುದ್ಧದ ಬೇಹುಗಾರಿಕೆ ಆರೋಪವನ್ನು ಅಲ್ಲಗಳೆದಿದ್ದ ಭಾರತ ಈ ಸಂಬಂಧ ಪಾಕಿಸ್ತಾನಕ್ಕೆ ಪತ್ರಮುಖೇನ ಆಕ್ಷೇಪ ವ್ಯಕ್ತಪಡಿಸಿತ್ತು.  ಕುಲಭೂಷಣ್ ಅವರನ್ನು ಬೇಹುಗಾರಿಕೆ ಆರೋಪದ ಮೇಲೆ ಕಳೆದ ವರ್ಷ ಮಾರ್ಚ್ 6ರಂದು ಇರಾನ್​ನಲ್ಲಿ ಬಂಧಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಜಾಧವ್​ರ ತಾಯಿ ಅವಂತಿ ಜಾಧವ್ ಮರಣದಂಡನೆ ತಡೆ ಕೋರಿ ಕಳೆದ ತಿಂಗಳು ಪಾಕ್​ನ ಉನ್ನತ ಕೋರ್ಟ್​ಗೆ ಮನವಿ ಸಲ್ಲಿಸಿದ್ದರು.

No Comments

Leave A Comment