Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಪಾಕ್ ಪುಂಡಾಟ: ಶೆಲ್ ದಾಳಿಗೆ ಓರ್ವ ಮಹಿಳೆ ಬಲಿ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಸೈನಿಕರು ಮತ್ತೆ ತಮ್ಮ ಪುಂಡಾಟವನ್ನು ಮುಂದುವರೆಸಿದ್ದು, ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಗೆ ಓರ್ವ ಮಹಿಳೆ ಬಲಿಯಾಗಿರುವ ಘಟನೆ ಗುರುವಾರ ನಡೆದಿದೆ.

ನೌಶೆರಾ ಸೆಕ್ಟರ್’ನ ಲಾಮ್ ಬೆಲ್ಟ್ ಬಳಿಯಿರುವ ಗ್ರಾಮದ ಬಳಿ ಪಾಕಿಸ್ತಾನ ಸೇನೆ ಶೆಲ್ ದಾಳಿ ನಡೆಸಿದ್ದು, ದಾಳಿಗೆ ಅಖ್ತರ್ ಬಿ (35) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಅಲ್ಲದೆ, ಆಕೆ ಪತಿ ಮೊಹಮ್ಮದ್ ಹನೀಫ್ (40) ಎಂಬುವವರಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದುಬಂದಿದೆ.

ಕಳೆದ ರಾತ್ರಿ 10.40ರ ಸುಮಾರಿಗೆ ನೌಶೆರಾದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಸಣ್ಣ ಹಾಗೂ ಆಟೋಮೆಟಿಕ್ ಶಸ್ತ್ರಾಸ್ತ್ರಗಳ ಮೂಲಕ ಭಾರತೀಯ ಸೇನೆ ಮೇಲೆ ದಾಳಿ ನಡೆಸಿತ್ತು ಎಂದು ರಕ್ಷಣಾ ವಕ್ತಾರ ಹೇಳಿದ್ದಾರೆ.

ನಾಗರಿಕ ಪ್ರದೇಶಗಳ ಮೇಲೆ 82 ಎಂಎಂ ಮತ್ತು 120 ಎಂಎಂ ಶೆಲ್ ಗಳಿಂದ ಪಾಕಿಸ್ತಾನ ದಾಳಿ ನಡೆಸಿತ್ತು. ಈ ವೇಳೆ ಮಹಿಳೆಯೊಬ್ಬರು ಬಲಿಯಾಗಿದ್ದು, ಮತ್ತೋರ್ವ ವ್ಯಕ್ತಿಗೆ ಗಾಯಗಳಾಗಿವೆ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ ಎಂದು ತಿಳಿಸಿದ್ದಾರೆ.

No Comments

Leave A Comment