Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಮೈಸೂರು ಅರಮನೆಯ ಪ್ರವೇಶದ್ವಾರದಲ್ಲಿ ಬೆಂಕಿ

ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯ ಪ್ರವೇಶದ್ವಾರದ ಟಿಕೆಟ್ ಕೌಂಟರ್ ಬಳಿಯ ಎಸ್‌ಬಿಐ ಎಟಿಎಂನ ಬ್ಯಾಟರಿಯಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ.

ಶುಕ್ರವಾರ ಬೆಳಿಗ್ಗೆ 6.10ಕ್ಕೆ ಈ ಬೆಂಕಿ ಕಾಣಿಸಿಕೊಂಡಿದೆ. ಅರಮನೆಯ ಭದ್ರತಾ ಸಿಬ್ಬಂದಿಯು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಎಟಿಎಂ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಎಟಿಎಂನಲ್ಲಿ ಎಷ್ಟು ಮೊತ್ತ ಇತ್ತು ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಅರಮನೆಯ ಪ್ರವೇಶದ್ವಾರದ ಪಾರಂಪರಿಕ ಕಟ್ಟಡದ ಚಾವಣಿ ಹೊಗೆಯಿಂದ ಕಪ್ಪಾಗಿದೆ. ಪಕ್ಕದಲ್ಲೇ ಇದ್ದ ಭದ್ರತಾ ಸಿಬ್ಬಂದಿಯ ಶಸ್ತ್ರಾಗಾರಕ್ಕೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment