Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ವಿರುದ್ಧ ಆದಾಯ ತೆರಿಗೆ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಕಂಪನಿಯ ಹಣವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಹೇಳಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅರೋಪಿಸಿದ್ದರು. ಅಕೌಂಟ್ ಡಿಟೇಲ್ಸ್ ಮತ್ತು ತೆರಿಗೆ ಪಾವತಿ ದಾಖಲೆ ಕೋರಿ ಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣ ಸಂಬಂಧ ಪಟಿಯಾಲ ನ್ಯಾಯಾಲಯ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನೋಟಿಸ್ ವೊಂದನ್ನು ಜಾರಿ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯ, ಆದಾಯ ತೆರಿಗೆ ಇಲಾಖೆ ಮತ್ತಿತರ ಸಂಸ್ಥೆಗಳು ದಾಖಲೆ ಪತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನೋಟಿಸ್ ನಲ್ಲಿ ತಿಳಿಸಿತ್ತು.

ತೀರ್ಪನ್ನು ಪ್ರಶ್ನಿಸಿ ಸೋನಿಯಾಗಾಂಧಿಯವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ಹೈಕೋರ್ಟ್ ಪಟಿಯಾಲ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಲು ಸೂಚನೆ ನೀಡಿದೆ. ಅಲ್ಲದೆ ವಿಚಾರಣೆ ವೇಳೆ ಕೇವಲ ಸೋನಿಯಾ ಮತ್ತು ರಾಹುಲ್ ಗಾಂಧಿಯವರನ್ನು ಅಷ್ಟೇ ಅಲ್ಲದೆ, ಕಂಪನಿಯೊಂದಿಗೆ ಪಾಲುದಾರಿಕೆ ಹೊಂದಿರುವವರನ್ನು ವಿಚಾರಣೆಗೊಳಪಡಿಸುವಂತೆ ಆದೇಶಿಸಿದ್ದು, ಈ ಮೂಲಕ ತನಿಖೆಗೆ ಸುಗಮ ಹಾದಿ ಮಾಡಿಕೊಟ್ಟಿದೆ.

No Comments

Leave A Comment