Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಗಡಿಯಲ್ಲಿ ಉದ್ವಿಗ್ನ ವಾತಾವರಣ: 900ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದ ಸೇನೆ

ನೌಶೆರಾ: ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಉದ್ವಿಗ್ನ ವಾತಾರಣ ಮುಂದುವರೆದ ಹಿನ್ನಲೆಯಲ್ಲಿ 900ಕ್ಕೂ ಹೆಚ್ಚು ಜರನ್ನು ಸ್ಥಳಾಂತರಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ನೌಶೆರಾ, ಪುಲ್ವಾಮ ಸೇರಿದಂತೆ ಹಲವು ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡು ಹಾಗೂ ಶೆಲ್ ಗಳ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಗಡಿಯಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಸ್ಥಳಾಂತರಗೊಂಡ ಜನರಿಗಾಗಿ ಸೇನೆ ನಿರಾಶ್ರಿತ ಕೇಂದ್ರಗಳನ್ನು ಸ್ಥಾಪನೆ ಮಾಡಿದ್ದು, ನಿರಾಶ್ರಿತ ಕೇಂದ್ರಗಳಲ್ಲಿ ಜನರನ್ನು ಇರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಗಡಿಯಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಪಾಕಿಸ್ತಾನ ಸೇನೆ ನಿರಂತರವಾಗಿ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಲೇ ಇದ್ದು, ನಾಗರಿಕ ಪ್ರದೇಶ ಹಾಗೂ ಭಾರತೀಯ ಸೇನಾಪಡೆಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸುತ್ತಲೇ ಇದೆ. ಅಪ್ರಚೋದಿತ ಗುಂಡು ಹಾಗೂ ಶೆಲ್ ಗಳ ದಾಳಿ ಪರಿಣಾಮ ಗಡಿಯಲ್ಲಿನ ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣ ಹಾನಿಯುಂಟಾಗಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment