Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ವಿಷ ಸೇವಿಸಿ ಆತ್ಮಹತ್ಯೆ ಯತ್ನ:ಪತ್ನಿ,ಮಕ್ಕಳ ಸಾವು; ಪೇದೆ ಗಂಭೀರ

ಬೆಂಗಳೂರು: ಇಲ್ಲಿ  ಸಿಎಆರ್‌ ಪೇದೆಯೊಬ್ಬ ಪತ್ನಿ ಮಕ್ಕಳಿಬ್ಬರಿಗೆ ವಿಷ ನೀಡಿ , ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು, ಮಕ್ಕಳು ಮತ್ತು ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದು ಪೇದೆ ಸ್ಥಿತಿ ಚಿಂತಾಜನಕವಾಗಿದೆ.

ಸಂಪಿಗೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಹೆಗಡೆ ನಗರದ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಪೇದೆ ಸುಭಾಷ್‌ ಪತ್ನಿ ಮಕ್ಕಳಿಗೆ ವಿಷವುಣ್ಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಗೆ ಬಂದ ಸುಭಾಷ್‌ ಅಣ್ಣ ಸ್ಥಳೀಯರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪತ್ನಿ ವೀಣಾ ,ಮಕ್ಕಳಾದ 3 ವರ್ಷದ ಮಾನ್ಯ ,1 ವರ್ಷದ ಮಗು ಪ್ರಥ್ವಿ  ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

4 ವರ್ಷದ ಹಿಂದೆ ಬಳ್ಳಾರಿ ಮೂಲದ ಸುಭಾಷ್‌ -ವೀಣಾ ವಿವಾಹವಾಗಿತ್ತು ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂದು ತಿಳಿದು ಬಂದಿಲ್ಲ.

No Comments

Leave A Comment