Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಮಳೆ, ಗಾಳಿಗೆ ತುಂಡಾಗಿದ್ದ ತಂತಿ ಹಾಸನದಲ್ಲಿ ವಿದ್ಯುತ್ ತಂತಿ ತಗುಲಿ ಮೂವರ ಸಾವು

ಹಾಸನ: ವಿದ್ಯುತ್ ತಂತಿ ತಗುಲಿ ಮೂವರು ಸಾವಿಗೀಡಾಗಿದ್ದಾರೆ.

ಹಾಸನ ತಾಲೂಕು ಶಂಕರನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್‌ ಪ್ರವಹಿಸಿ ಗೋಪನಹಳ್ಳಿ ಗ್ರಾಮದ ರವಿ(56), ಪ್ರಸಾದ್(23) ಮತ್ತು ಕಿಟ್ಟಿ (59)ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿ ತೆರಳುತಿದ್ದಾಗ ದುರಂತ ನಡೆದಿದೆ. ಮಳೆ, ಗಾಳಿಗೆ ತುಂಡಾಗಿ ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿಯ ಸಮೀಪವೇ ಬೈಕ್‌ ಹಾದು ಹೋಗುವಾಗ ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲಿಯೇ ಮೂವರೂ ಸಾವಿಗೀಡಾಗಿದ್ದಾರೆ.

ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

No Comments

Leave A Comment