Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಅನುಮಾನಾಸ್ಪದ ಸಾವು: ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ಪತ್ನಿಯ ಮೃತದೇಹ ಪತ್ತೆ

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಧ್ಯಾನೇಶ್ವರ್ ಗನೋರ್ ಅವರ ಪತ್ನಿಯ ಮೃತದೇಹ ಸಂತಾ ಕ್ರುಜ್‌ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮಂಗಳವಾರ ರಾತ್ರಿ ಪತ್ತೆಯಾಗಿದೆ.

ತಡರಾತ್ರಿ 3.30ರರ ವೇಳೆಗೆ ಧ್ಯಾನೇಶ್ವರ್ ಅವರು ಕರ್ತವ್ಯ ಮುಗಿಸಿ ಮನೆಗೆ ಮರಳಿದಾಗ ಪತ್ನಿ ದೀಪಾಲಿ ಗನೋರ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಬಳಿಯಲ್ಲಿ ಒಂದು ಚಾಕು ಸಹ ಬಿದ್ದಿತ್ತು. ಅವರ 21 ವರ್ಷ ವಯುಸ್ಸಿನ ಮಗ ಸಹ ಮಂಗಳವಾರ ಸಂಜೆಯಿಂದ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಮೊದಲ ತಂಡದಲ್ಲಿ ಧ್ಯಾನೇಶ್ವರ್ ಸಹ ಒಬ್ಬರು. 2012ರಲ್ಲಿ ಶೀನಾ ಬೋರಾ ಅವರನ್ನು ಅವರ ತಾಯಿ ಇಂದ್ರಾಣಿ ಮುಖರ್ಜಿ ಹತ್ಯೆ ಮಾಡಿದ್ದಾರೆ ಎಂಬ ಆರೋಪವಿದೆ. ಶೀನಾ ಬೋರಾ ಅವರ ಮಲತಂದೆ, ಇಂದ್ರಾಣಿ ಮುಖರ್ಜಿ ಅವರ ಪತಿ ಪೀಟರ್ ಮುಖರ್ಜಿ ಸಹ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಘಟನೆ ನಡೆದ ಮೂರು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು.

No Comments

Leave A Comment