Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಮುಂಬೈ ಐಪಿಎಲ್ ಗೆಲುವಿನ ರೂವಾರಿ ರೋಹಿತ್ ಶರ್ಮಾ ಟೀಂ ಇಂಡಿಯಾದ ಉಪ ನಾಯಕ!

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟ ರೋಹಿತ್ ಶರ್ಮಾ ಟೀಂ ಇಂಡಿಯಾದ ಉಪ ನಾಯಕನಾಗಿ ಆಯ್ಕೆಯಾಗಲಿದ್ದಾರೆ.

ಜೂನ್ 1ರಿಂದ ಇಂಗ್ಲೆಂಡ್ ನಲ್ಲಿ ಚಾಂಪಿಯನ್ಸ್ ಟ್ರೋಫಿ ಆರಂಭಗೊಳ್ಳಲಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡವನ್ನು ಉಪನಾಯಕ ಅಜಿಂಕ್ಯ ರಹಾನೆ ಯಶಸ್ವಿಯಾಗಿ ಮುನ್ನಡೆಸಿದ್ದರು. ಮೂರನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗಾಯಗೊಂಡಿದ್ದರಿಂದ ಮೈದಾನದಿಂದ ದೂರ ಉಳಿದರು ಆಗ ಅಂಜಿಕ್ಯ ರಹಾನೆ ತಂಡವನ್ನು ಮುನ್ನಡೆಸಿದ್ದರು. ಇನ್ನು ಸರಣಿಯ ನಿರ್ಣಾಯಕ ನಾಲ್ಕನೇ ಪಂದ್ಯದಲ್ಲಿ ತಂಡ ಭರ್ಜರಿಯಾಗಿ ಗೆಲುವು ಸಾಧಿಸಿತ್ತು.

ಟೀಂ ಇಂಡಿಯಾದ ತಂಡದ ಉಪನಾಯಕನನ್ನು ಸದ್ಯ ಬಿಸಿಸಿಐ ಆಯ್ಕೆ ಸಮಿತಿ ಯಾರು ಎಂದು ಘೋಷಿಸಿಲ್ಲ. ಆದರೆ ಅಂತಹ ಸಂದರ್ಭ ಬಂದರೆ ಕಂಡಿತವಾಗಿಯೂ ಉಪನಾಯಕ ಯಾರೆಂದು ಘೋಷಿಸುತ್ತೇವೆ ಎಂದು ಮೂಲಗಳು ತಿಳಿಸಿರುವುದಾಗಿ ಡೆಕ್ಕೆನ್ ಕ್ರಾನಿಕಲ್ ಪತ್ರಿಕೆ ವರದಿ ಮಾಡಿದೆ.

No Comments

Leave A Comment