Log In
BREAKING NEWS >
ಉಡುಪಿಯ ಹಲವು ಕಡೆಗಳಲ್ಲಿ ಕೈ ಕೊಟ್ಟ ಮತಯ೦ತ್ರ-ಮತದಾನಕ್ಕೆ ಪರದಾಟುವ ಪರಿಸ್ಥಿತಿ....

ಪ್ಲಾಸ್ಟಿಕ್ ಮುಕ್ತ ಜಿಲ್ಲೆಗೆ ಸಹಕರಿಸಿ- ಜಿಲ್ಲಾಧಿಕಾರಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆ ಮಾಡಲು ಎಲ್ಲಾ ನಾಗರಿಕರು ಮತ್ತು ವರ್ತಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ತಿಳಿಸಿದ್ದಾರೆ.

ಅವರು ಗುರುವಾರ ಉಡುಪಿ ನಗರಸಭೆ ಆವರಣದಲ್ಲಿ , ನಗರಸಭೆ ಉಡುಪಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಹಯೋಗದಲ್ಲಿ ಆಯೋಜಿಸಿದ್ದ ಪ್ಲಾಸ್ಟಿಕ್ ಕುರಿತ ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಎಲ್ಲಾ ವಿಧದ ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಪ್ಲಾಸ್ಟಿಕ್ ಕೈಚೀಲ, ಬ್ಯಾನರ್, ಪ್ಲೆಕ್ಸ್ ಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ಜಿಲ್ಲೆಯ ಎಲ್ಲಾ ನಾಗರೀಕರು ಮತ್ತು ವರ್ತಕರು ದಿನ ನಿತ್ಯದ ಬಳಕೆಗೆ ಪೇಪರ್ ನಿಂದ ಆಥವಾ ಬಟ್ಟೆಯಿಂದ ತಯಾರಿಸಿದ ಕೈ ಚೀಲಗಳನ್ನು ಬಳಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪ್ಲಾಸ್ಟಿಕ್ ದುಷ್ಪರಿಣಾಮಗಳ ಕುರಿತು ವರ್ತಕರಿಗೆ ಮತ್ತು ನಾಗರೀಕರಿಗೆ ಅರಿವು ಮೂಡಿಸಲು ಈ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಾಥಾ ದಲ್ಲಿ ವರ್ತಕರಿಗೆ ಹಾಗೂ ನಾಗರೀಕರಿಗೆ ಬಟ್ಟೆಯ ಕೈ ಚೀಲಗಳನ್ನು ವಿತರಿಸಲಾಗುವುದು, ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಎಲ್ಲರೂ ಸಹಕರಿಸುವಂತೆ ತಿಳಿಸಿದರು.

ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ , ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮಿಕಾಂತ್, ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ನಗರಸಭೆಯ ಪರಿಸರ ಇಂಜಿನಿಯರ್ ರಾಘವೇಂದ್ರ ಸ್ವಾಗತಿಸಿ, ವಂದಿಸಿದರು.

No Comments

Leave A Comment