Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಬುರ್ಹಾನ್ ವಾನಿ ಹತ್ಯೆ ನಂತರ ಹಿಜ್ಬುಲ್ ಕಮಾಂಡರ್ ಆಗಿದ್ದ ಸಬ್ಜಾರ್ ಭಟ್ ಕೂಡ ಎನ್ ಕೌಂಟರ್ ನಲ್ಲಿ ಹತ!

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿ ನೇಮಕವಾಗಿದ್ದ ವಾನಿ ಆಪ್ತ ಸಬ್ಜಾರ್ ಭಟ್ ನನ್ನೂ ಕೂಡ ಭಾರತೀಯ ಸೇನೆಯ ಯೋಧರ ಶನಿವಾರ ಹೊಡೆದುರುಳಿಸಿದ್ದಾರೆ.

ಉಗ್ರರು ಹಾಗೂ ನುಸುಳುಕೋರರನ್ನು ಮಟ್ಟಹಾಕಲು ಮುಂದಾಗಿರುವ  ಭದ್ರತಾ ಪಡೆಗಳು ಇಂದು ನಡೆಸಿದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಸಬ್ಜಾರ್ ಭಟ್ ಅಲಿಯಾಸ್ ಅಬು ಜರಾರ್ ಸೇರಿ 8 ಮಂದಿ  ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿವೆ. ಪುಲ್ವಾಮಾ ಜಿಲ್ಲೆಯ ಟ್ರಾಲ್ ಸೆಕ್ಟರ್ ನ ಕಟ್ಟಡವೊಂದರಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರು ಭಾರತೀಯ ಸೇನಾ ಪಡೆ ದಾಳಿಗೆ ಬಲಿಯಾಗಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ  ರಾಂಪುರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಆರು ಮಂದಿ ಉಗ್ರರನ್ನು ಭಾರತೀಯ ಸೇನಾ ಪಡೆ ಗುಂಡಿಟ್ಟು ಹತ್ಯೆಗೈದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.ಪುಲ್ವಾಮಾ ಜಿಲ್ಲೆಯ ಟ್ರಾಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸಬ್ಜಾರ್ ಭಟ್ ನನ್ನು ಯೋಧರು ಹೊಡೆದುರುಳಿಸಿದ್ದು, ಆ ಮೂಲಕ ಇಂದು ಕಾಶ್ಮೀರದಲ್ಲಿ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಈ ವರೆಗೂ ಸಾವನ್ನಪ್ಪಿದ ಉಗ್ರ ಸಂಖ್ಯೆ  8ಕೇರಿದೆ.

ರಾಮ್ ಪುರ ಸೆಕ್ಟರ್ ನಲ್ಲೂ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿ 6 ಮಂದಿ ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಟ್ರಾಲ್ ಎನ್ ಕೌಂಟರ್ ನಲ್ಲಿ ಸಬ್ಜಾರ್ ಭಟ್ ಸೇರಿ ಒಟ್ಟು ಇಬ್ಬರು  ಉಗ್ರರನ್ನು ಕೊಂದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಅನಂತ್ ನಾಗ್ ಜಿಲ್ಲೆಯಲ್ಲಿ 2016ರ ಜುಲೈ 8ರಂದು ಉಗ್ರ ಬುರ್ಹಾನ್ ವಾನಿಯನ್ನು ಸೇನೆ ಕೊಂದು ಹಾಕಿತ್ತು. ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ಉಲ್ಬಣಗೊಂಡಿತ್ತು.

No Comments

Leave A Comment