Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಕೇರಳ: ಸಾರ್ವಜನಿಕವಾಗಿ ಕರುವನ್ನು ಕೊಂದ ಮೂವರು ಯೂತ್ ಕಾಂಗ್ರೆಸ್ ಕಾರ್ಯಕರ್ತರ ವಜಾ

ಕಣ್ಣೂರು(ಕೇರಳ): ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಘೋಷಣೆ ವಿರೋಧಿಸಿ ಸಾರ್ವಜನಿಕ ಸ್ಥಳದಲ್ಲಿ ದನಗಳ ಹತ್ಯೆ ಮಾಡಿದ್ದ ಆರೋಪದ ಮೇಲೆ ಮೂವರು ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಕೇರಳದಲ್ಲಿ ಆಡಳಿತರೂಢ ಸಿಪಿಎಂ ನೇತೃತ್ವದ ಎಲ್ಡಿಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನ ಯುವ ಕಾರ್ಯಕರ್ತರು ಕಣ್ಣೂರಿನಲ್ಲಿ ಸಾರ್ವಜನಿಕವಾಗಿ ಕರುವನ್ನು ಕೊಂದು ಬೀಫ್ ಫೆಸ್ಟ್ ಹೆಸರಲ್ಲಿ ಗೋಮಾಂಸವನ್ನು ಭಕ್ಷಿಸಿದ್ದರು.

ಇನ್ನು ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರ ಈ ಕೃತ್ಯವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದರು. ಇದೊಂದು ಅನಾಗರಿಕ ನಡೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಾರ್ವಜನಿಕವಾಗಿ ಪ್ರಾಣಿ ಹತ್ಯೆ ಮಾಡಿದ ಆರೋಪದ ಮೇಲೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಾಣಿ ಹಿಂಸಾ ತಡೆ ಮಸೂದೆ-1906ರ ಅಡಿಯಲ್ಲಿ ಕಣ್ಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

No Comments

Leave A Comment